ಮೋದಿಯವರನ್ನು ಭೇಟಿ ಮಾಡಿದ ಮಾಜಿ ಪ್ರಧಾನಿ ದೇವೇಗೌಡ
ನವದೆಹಲಿ- ನೆರೆ ಹಾವಳಿ, ಬೆಳೆ ಹಾನಿ, ಸಾಲದಬಾಧೆ ಸೇರಿದಂತೆ ನಾನಾ ಸಮಸ್ಯೆಗಳಿಂದ ಸಂಕಷ್ಟಕ್ಕೆ ಸಿಲುಕಿ ತತ್ತರಿಸುತ್ತಿರುವ ದೇಶದ ರೈತರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ವಿಶೇಷ ಯೋಜನೆಯೊಂದನ್ನು ರೂಪಿಸಬೇಕೆಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮನವಿ ಮಾಡಿದ್ದಾರೆ.
ಕರ್ನಾಟಕದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾನಾ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ರೈತರನ್ನು ರಕ್ಷಿಸಲು ವಿಶೇಷ ಯೋಜನೆಯೊಂದನ್ನು ಜಾರಿಗೆ ತರುವ ಅಗತ್ಯವಿದೆ ಎಂದು ಗೌಡರು ಪ್ರಧಾನಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.ಮತ್ತು ಗೊಮ್ಮಟೇಶ್ವರ ಮಸ್ತಾಭಿಷೇಕಕ್ಕೆ 500ಕೋಟಿ ನೀಡುವಂತೆ ಮೋದಿಗೆ ಗೌಡರ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ
loading...
No comments