Breaking News

ಮೋದಿಯ ಬಗ್ಗೆ ಎಚ್ಚರಿಕೆಯಿಂದಿರಿ. ಜೆಡಿಎಸ್ ಕಾರ್ಯಕರ್ತರಿಗೆ ದೇವೇಗೌಡ ವಾರ್ನಿಂಗ್.

ಬೆಂಗಳೂರು: ಶುಕ್ರವಾರ ನಗರದ ಅರಮನೆ ಮೈದಾನದಲ್ಲಿ ನಡೆದ ರಾಜ್ಯಮಟ್ಟದ ಚುನಾವಣಾ ಪೂರ್ವಭಾವಿ ಸಮಾವೇಶ ಉದ್ದೇಶಿಸಿ ಮಾತನಾಡಿದ ದೇವೇಗೌಡ ಅವರು, 2018ರ ಚುನಾವಣೆ ಏನಾಗಬಹುದು ಎಂದು ನನಗೆ ಗೊತ್ತಿದೆ. ಯಾಕೆಂದರೆ ಪ್ರಧಾನಿ ನರೇಂದ್ರ ಮೋದಿಯನ್ನು ಹಗುರವಾಗಿ ಪರಿಗಣಿಸಬೇಡಿ.

2018ರ ಚುನಾವಣೆ ವೇಳೆ  ಬಿಪಿಎಲ್ ಕಾರ್ಡ್ ಹೊಂದಿರುವ ಖಾತೆಗಳಿಗೆ ಕನಿಷ್ಠ 20ರಿಂದ 25 ಸಾವಿರ ರೂಪಾಯಿ ಹಣ ಜಮಾ ಮಾಡಬಹುದು. ಈ ಬಗ್ಗೆ ಎಚ್ಚರಿಕೆ ಇರಲಿ ಎಂದು ಪಕ್ಷದ ಕಾರ್ಯಕರ್ತರಿಗೆ ಕಿವಿಮಾತನ್ನು ಹೇಳಿದ್ದಾರೆ.

ಕಾರ್ಯಕರ್ತರು ಯಾವುದೇ ರೀತಿಯ ಹಣದ ಆಮಿಷಗಳಿಗೆ ಬಲಿಯಾಗದೆ ಪಕ್ಷಕ್ಕಾಗಿ ದುಡಿಯಬೇಕು ಹಾಗೂ ಜೆಡಿಎಸ್ ಮುಖಂಡರುಗಳು ಹೆಚ್ಚು ಹೆಚ್ಚು ಕಾರ್ಯಕರ್ತರನ್ನು ಜೆಡಿಎಸ್ ಪಕ್ಷಕ್ಕೆ ಆಹ್ವಾನಿಸಬೇಕು. ಯಾವ ಮುಖಂಡ ಹೆಚ್ಚು ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸುತ್ತಾನೋ ಅಂತಹ ಮುಖಂಡರಿಗೆ ಮುಂದಿನ ಚುಣಾವಣೆಯಲ್ಲಿ ಟಿಕೆಟ್ ನೀಡೋದಾಗಿ ಭರವಸೆ ನೀಡಿದ್ದಾರೆ.
loading...

No comments