Breaking News

ಕೋಮುಗಲಭೆಗೆ ಪ್ರಚೋದನೆ ನೀಡುವ ವೀಡಿಯೋ, ಆರೋಪಿಯ ಬಂಧನ


ಶಿವಮೊಗ್ಗ :  ಜಿಲ್ಲೆಯಲ್ಲಿರುವ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯುತ್ತಿರುವ ಬುರ್ಕಾ ವಿವಾದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಲ್ಲಿ ಕೋಮುಗಲಭೆಗೆ ಪ್ರಚೋದನೆ ನೀಡುವ ವೀಡಿಯೋ ಅಪ್ಲೋಡ್ ಮಾಡಿದ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.

ಆರೋಪಿ ಯುವಕ ಸಲ್ಮಾನ್ (30) ಸಿರಾ ನಗರದ ನಿವಾಸಿಯಾಗಿದ್ದು ಬುರ್ಕಾ ವಿವಾದಕ್ಕೆ ಸಂಬಂಧಿಸಿದಂತೆ ವೀಡಿಯೋ ತಯಾರಿಸಿ ಹಿಂದೂ ಸಂಘಟನೆಗಳ ಮುಖಂಡರಿಗೆ ಕೊಲೆ ಬೆದರಿಕೆ ಹಾಕಿದ್ದ ಅಲ್ಲದೆ ತಂದೆ ತಾಯಿ ಬಗ್ಗೆ ಅವ್ಯಾಚ್ಯ ಪದಗಳನ್ನು ಉಪಯೋಗಿಸಿದ್ದ. ಈ ವೀಡಿಯೋ ರಾಜ್ಯಾದ್ಯಂತ ವೈರಲ್ ಆಗಿತ್ತು.

ಶಿವಮೊಗ್ಗ ಪೋಲೀಸರು ನೀಡಿದ ಮಾಹಿತಿಯ ಕಾರ್ಯಪ್ರವೃತ್ತರಾದ ಪೋಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕನ್ನಡ ಚಿತ್ರ ನಟ ಜಗ್ಗೇಶ್ ಕೂಡ ತಮ್ಮ ಫೇಸ್ಬುಕ್ ಪೇಜ್ ನಲ್ಲಿ ಆರೋಪಿಯನ್ನು ಬಂಧಿಸುವಂತೆ ಮನವಿ ಮಾಡಿದ್ದರು.
loading...

No comments