ಮೂಡಿಗೆರೆ ಅಕ್ರಮ ಗೋ ಕಳ್ಳ ಸಾಗಣೆ ಆರೋಪಿಗಳು ಪರಾರಿ
ಬೆಳ್ತಂಗಡಿ : ಮೂಡಿಗೆರೆಯಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋವುಗಳನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಬುಧವಾರ ಮುಂಜಾನೆ ವೇಳೆ ಚಾರ್ಮಾಡಿಯಲ್ಲಿ ಪತ್ತೆ ಹಚ್ಚಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬುಧವಾರ ಮುಂಜಾನೆ ಮೂಡಿಗೆರೆ ಕಡೆಯಿಂದ ಮಂಗಳೂರಿನ ಕಡೆಗೆ ಎರಡು ವಾಹನಗಳಲ್ಲಿ ಅಮಾನುಷ ರೀತಿಯಲ್ಲಿ ಗೋವುಗಳನ್ನು ಕಟ್ಟಿಹಾಕಿ ಸಾಗಾಟ ಮಾಡುತ್ತಿದ್ದ ವೇಳೆ ಚಾರ್ಮಾಡಿಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು, ಪ್ರಕರಣದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡಲಾಗುತ್ತಿದ್ದ 2 ಝೈಲೋ ವಾಹನಗಳು ಮತ್ತು 9 ದನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣದಲ್ಲಿ ಆರೋಪಿಗಳು ಪರಾರಿಯಾಗಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
loading...
No comments