Breaking News

ಕಾಶ್ಮೀರ ಎನ್ಕೌಂಟರ್ ನಾಲ್ವರು ಹಿಜ್ಬುಲ್ ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ


ಹೊಸದಿಲ್ಲಿ: ದಕ್ಷಿಣ ಕಾಶ್ಮೀರದ ಕುಲ್ಗಾಂನಲ್ಲಿ ಭಾನುವಾರ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರು ಹಾಗೂ ಇಬ್ಬರು ಯೋಧರು ಮೃತಪಟ್ಟಿದ್ದಾರೆ.
ಎನ್‍ಕೌಂಟರ್‍ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.   ದಕ್ಷಿಣ ಕಾಶ್ಮೀರದ ಕುಲ್ಗಾಮ್‍ನ ಯರಿಪೋರಾ ಪೊಲೀಸ್ ಠಾಣಿ ವ್ಯಾಪ್ತಿಯ ಪ್ರದೇಶದಲ್ಲಿ ಉಗ್ರಗಾಮಿಗಳು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಯೋಧರು ನಿನ್ನೆ ರಾತ್ರಿಯಿಂದ ತೀವ್ರ ಶೋಧ ನಡೆಸುತ್ತಿದ್ದರು. ಇದೇ ಸಂದರ್ಭದಲ್ಲಿ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದರು. ಯೋಧರು ಪ್ರತಿ ದಾಳಿ ಮಾಡಿದಾಗ ಗುಂಡಿನ ಕಾಳಗ ನಡೆಯಿತು.

ಈ ಎನ್‍ಕೌಂಟರ್‍ನಲ್ಲಿ ನಾಲ್ವರು ಉಗ್ರರು ಹತರಾದರು ಮತ್ತು ಇಬ್ಬರು ಯೋಧರು ಹುತಾತ್ಮರಾದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತೀವ್ರ ಗಾಯಗೊಂಡಿರುವ ಕೆಲವು ಯೋಧರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.   ಗುಂಡಿನ ಕಾಳಗದಲ್ಲಿ ಗಾಯಗೊಂಡು ಪರಾರಿಯಾಗಿರುವ ಇನ್ನೂ ಮೂವರು ಉಗ್ರಗಾಮಿಗಳಿಗಾಗಿ ತೀವ್ರ ಶೋಧ ಮುಂದುವರೆದಿದೆ.
ಹತರಾದ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.


loading...

No comments