Breaking News

ದಕ್ಷಿಣ ಕನ್ನಡದ ಜನರಿಗೆ ಅನ್ಯಾಯವಾಗಲು ಬಿಡಲ್ಲ - ಕುಮಾರ ಸ್ವಾಮಿ

ಮಂಗಳೂರು : ಜೆಡಿಎಸ್ ಅಧಿಕಾರಕ್ಕೆ ಬಂದರೆ ಎತ್ತಿನ ಹೊಳೆಯ ಅವ್ಯವಹಾರ ಬಯಲಿಗೆಳೆಯುತ್ತೇನೆ, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 
ಮಂಗಳೂರಿನ ಜೆಡಿಎಸ್ ಕಛೇರಿಯಲ್ಲಿ ಮಾತನಾಡಿದ ಕುಮಾರಸ್ವಾಮಿ "ಎತ್ತಿನಹೊಳೆ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದ್ದು ಅಂದಿನ ಬಿಜೆಪಿ ಮುಖ್ಯಮಂತ್ರಿ ಸದಾನಂದ ಗೌಡ ಸರ್ಕಾರ. ಈಗ ದ.ಕ ಸಂಸದರು ಎತ್ತಿನಹೊಳೆ ಯೋಜನೆ ವಿರುದ್ಧ ಯಾಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂಬುದೇ ತಿಳಿಯುತ್ತಿಲ್ಲ" ಎಂದು ಕುಮಾರ ಸ್ವಾಮಿ ಹೇಳಿದರು.
ಎತ್ತಿನ ಹೊಳೆ ಯೋಜನೆ ಒಂದು ದುಡ್ಡು ಹೊಡೆಯುವ ಯೋಜನೆ, ಈ ಯೋಜನೆಯಿಂದ  ನೀರು ಸಿಗಲ್ಲವೆಂದು ಎಲ್ಲರಿಗೂ ಗೊತ್ತು. ಎತ್ತಿನಹೊಳೆ ಯೋಜನೆ ನೆಪದಲ್ಲಿ ಗುತ್ತಿಗೆದಾರರಿಂದ ಹಣ ಪಡೆಯಲಾಗಿದೆ. ಒಂದು ವೇಳೆ ಜೆಡಿಎಸ್ ಅಧಿಕಾರಕ್ಕೆ ಬಂದರೆ ಎತ್ತಿನಹೊಳೆ ಯೋಜನೆಯ ಅಕ್ರಮಗಳನ್ನು ಬಯಲಿಗೆಳೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ದಕ್ಷಿಣ ಕನ್ನಡ ಜನರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದರು. ಮುಂದಿನ ಚುಣಾವಣೆಯಲ್ಲಿ ಜೆಡಿಎಸ್ 113ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದರು.
loading...

No comments