ಬೇರೆಯವರ ಬಾತ್‍ರೂಂಗಳಲ್ಲಿ ಇಣುಕಿ ನೋಡುವುದೇ ಮೋದಿ ಕೆಲಸ : ರಾಹುಲ್ ಲೇವಡಿ
ಲಕ್ನೊ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ರೆನ್‍ಕೋಟ್ ಹಾಕಿಕೊಂಡು ಸ್ನಾನ ಮಾಡುವ ಕಲೆ ಚೆನ್ನಾಗಿ ತಿಳಿದಿದೆ ಎಂದು ವ್ಯಂಗವಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಉಪಾಧ್ಯಾಕ್ಷ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ಪ್ರಧಾನಿಯವರಿಗೆ ಕೆಲಸ ಮಾಡುವುದಕ್ಕಿಂತ ಹೆಚ್ಚಾಗಿ ಜನರು ಬಾತ್‍ರೂಂಗಳಲ್ಲಿ ಏನು ಮಾಡುತ್ತಾರೆ ಎಂಬುದನ್ನು ಇಣುಕಿ ನೋಡುವುದರಲ್ಲೇ ಹೆಚ್ಚು ಆಸಕ್ತಿ ಇದೆ ಎಂದು ಲೇವಡಿ ಮಾಡಿದ್ದಾರೆ. ಉತ್ತರಪ್ರದೇಶ ವಿಧಾನಸಭೆ ಚುನಾವಣಾ ಫಲಿತಾಂಶಗಳು ಹೊರಬಿದ್ದರೆ ಪ್ರಧಾನಿಯವರಿಗೆ ಗರ ಬಡಿದಂತಾಗುತ್ತದೆ ಎಂದೂ ರಾಹುಲ್ ಟೀಕಿಸಿದ್ದಾರೆ.
ಲಕ್ನೋದಲ್ಲಿ ಇಂದು ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಜೊತೆ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ವಿರುದ್ಧ ಟೀಕಾಪ್ರಹಾರ ನಡೆಸಿದರು.
loading...
No comments