Breaking News

ಕಾಂಗ್ರೆಸ್‌ಗೆ “ಗುಡ್‌ಬೈ” ಹೇಳುವರೇ ಸತೀಶ್ ಜಾರಕಿಹೊಳಿ



ಬೆಳಗಾವಿ : ಮಾಜಿ ಸಚಿವ ಸತೀಶ್ ಜಾರಕಿಹೊಳಿ ಶೀಘ್ರವೇ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಲಿದ್ದಾರೆ ಎಂಬ ಪಿಸುಮಾತು ಜಿಲ್ಲೆಯಾದ್ಯಂತ ಕೇಳಿಬರುತ್ತಿದೆ.
ಸಚಿವ ಸ್ಥಾನ ಕಳೆದುಕೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮುನಿಸಿಕೊಂಡಿರುವ ಸತೀಶ್ ಜಾರಕಿಹೊಳಿ ಅನ್ಯಪಕ್ಷದತ್ತ ಮುಖಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ಹಿನ್ನೆಲೆಯಲ್ಲಿ ಇತ್ತೀಚೆಗೆ ನಡೆದ ಬೆಳಗಾವಿ ಎಪಿಎಂಸಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಜಾರಕಿಹೊಳಿ ಪರೋಕ್ಷ ಕಾರಣವಾಗಿದ್ದರು ಎನ್ನಲಾಗಿದೆ.
ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ೨೦೧೩ರ ಚುನಾವಣೆಯಲ್ಲಿ ಸೋಲನುಭವಿಸಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೆ ಅದೇ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದಾರೆ. ಎಪಿಎಂಸಿ ಚುನಾವಣೆಯಲ್ಲಿ ಆರು ಕಾಂಗ್ರೆಸ್ ಸದಸ್ಯರ ಗೆಲುವಿಗೆ ಲಕ್ಷ್ಮಿ ಕಾರಣರಾಗಿದ್ದಾರೆ. ಇದೇ ಹಿನ್ನೆಲೆಯಲ್ಲಿ ಲಕ್ಷ್ಮಿ ಅವರಿಗೆ ಈ ಕ್ಷೇತ್ರದಿಂದ ಟಿಕೆಟ್ ನೀಡುವುದು ಖಚಿತವಾಗಿದೆ. ಇದರಿಂದ ಬೇಸತ್ತು ಸತೀಶ್ ಜಾರಕಿಹೊಳಿ ಕಾಂಗ್ರೆಸ್ ತೊರೆಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಸತೀಶ್ ಜಾರಕಿಹೊಳಿ ಅವರ ಈ ನಡೆ ಕಾಂಗ್ರೆಸ್ ಮತ್ತು ಬಿಜೆಪಿಗಳಿಗೆ ಆಘಾತ ತಂದಿತು. ಒಂದು ವೇಳೆ ಪಕ್ಷ ತೊರೆದು ಸತೀಶ್ ಜಾರಕಿಹೊಳಿ ಜೆಡಿಎಸ್ ಸೇರಿದರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಅವನತಿಯ ಹಾದಿ ಹಿಡಿಯುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ.
loading...

No comments