Breaking News

ಪರಪ್ಪನ ಅಗ್ರಹಾರ ಜೈಲಿಗೆ ಹೆಚ್ಚಿದ ಭದ್ರತೆ


ಬೆಂಗಳೂರು : ಅಕ್ರಮ ಆಸ್ತಿ ಪ್ರಕರಣದಲ್ಲಿ ತಮಿಳುನಾಡು ಎಐಎಡಿಎಂಕೆ ಪಕ್ಷದ ನಾಯಕಿ ಶಶಿಕಲಾ ಅವರಿಗೆ ಜೈಲು ಶಿಕ್ಷೆ ಪ್ರಕಟಗೊಂಡ ಬೆನ್ನಲ್ಲೇ ನಗರದ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರೀಯ ಕಾರಾಗೃಹದ ಭದ್ರತೆ ಹೆಚ್ಚಿಸಲಾಗಿದೆ.
ಸುಪ್ರೀಂಕೋರ್ಟ್ ಆದೇಶದಂತೆ, ಇಂದು ಸಂಜೆಯೊಳಗೆ ಪರಪ್ಪನ ಅಗ್ರಹಾರ ಜೈಲಿಗೆ ಬಂದು ಶರಣಾಗಬೇಕಿದೆ. ಅವರೊಂದಿಗೆ, ಅಕ್ರಮ ಆಸ್ತಿ ಪ್ರಕರಣದಲ್ಲಿ ಇತರ ಅಪರಾಧಿಗಳಾಗಿರುವ ಇಳವರಸಿ ಹಾಗೂ ಸುಧಾಕರನ್ ಅವರೂ ನಗರಕ್ಕೆ ಬಂದು ಶರಣಾಗಬೇಕಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರೀಯ ಕಾರಾಗೃಹಕ್ಕೆ ಬಿಗಿಬಂದೋಬಸ್ತ್ ನೀಡಲಾಗಿದ್ದು, ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಡಿಸಿಪಿ ಡಾ.ಬೋರಲಿಂಗಯ್ಯ ತಿಳಿಸಿದ್ದಾರೆ.
ಶಶಿಕಲಾ ಅವರು ಶರಣಾಗುವ ವೇಳೆ ಯಾವುದೇ ಅಹಿತಕರ ಘಟನೆಗಳು, ದೊಂಬಿ, ಗಲಾಟೆ ನಡೆಯದಿರಲೆಂದು ಕಾರಾಗೃಹದ ಸುತ್ತಲೂ ನಿರ್ದಿಷ್ಟ ದೂರದವರೆಗೆ ೧೪೪ನೇ ಸೆಕ್ಷನ್ ಜಾರಿಗೊಳಿಸಲು ನಗರ ಪೊಲೀಸರು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ 


loading...

No comments