ಪ್ರಚಾರದ ವೇಳೆ ಸೋನಿಯಾ ಗಾಂದಿಗೆ ಜೈಕಾರ ಹಾಕಿದ ಬಿಜೆಪಿ ಕಾರ್ಯಕರ್ತರು ?
ರತ್ನಗಿರಿ: ದೇಶದ ಎರಡು ದೊಡ್ಡ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಉತ್ತರ ಪ್ರದೇಶ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭೆ ಚುನಾವಣಾ ಪ್ರಚಾರದ ಭರಾಟೆಯಲ್ಲಿ ಮುಳುಗಿವೆ.
ಪ್ರಚಾರದ ವೇಳೆ ಎರಡೂ ರಾಜಕೀಯ ಪಕ್ಷಗಳ ಮುಖಂಡರು ಒಬ್ಬರ ಮೇಲೊಬ್ಬರು ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಈ ವೇಳೆ ಮಹಾರಾಷ್ಟ್ರದಲ್ಲಿ ಸೋನಿಯಾ ಗಾಂಧಿ ಪರ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ ಸುದ್ದಿಯಾಗಿದ್ದಾರೆ.ಆದರೆ ಬಿಜೆಪಿಯ ಕಾರ್ಯಕರ್ತರು ಕೂಗಿರುವ ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಅಧ್ಯಕ್ಷೆ ಸೋನಿಯಾ ಗಾಂಧಿ ಅಲ್ಲ. ಬದಲಾಗಿ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಬಾಂಬೇಡ್ ಗ್ರಾಮದವರು. ಸೋನಿಯಾ ಗಾಂಧಿ ಹೆಸರಿನ ಮಹಿಳೆ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಪರ ಸ್ಪರ್ಧೆಗೆ ಇಳಿದಿದ್ದಾರೆ.
ಜಿ.ಪಂ. ಚುನಾವಣೆಯಲ್ಲಿ ಬಿಜೆಪಿ ಪರ ಸ್ಪರ್ಧೆಗೆ ಇಳಿದಿರುವ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಹೆಸರಿನ ಮಹಿಳೆಗೆ ಅಲ್ಲಿನ ಬಿಜೆಪಿಯ ಕಾರ್ಯಕರ್ತರು ಪ್ರಚಾರದ ವೇಳೆ ಸಾಥ್ ಕೊಟ್ಟಿದ್ದಾರೆ. ಅಲ್ಲದೆ ಸೋನಿಯಾ ಗಾಂಧಿಗೆ ಜಯವಾಗಲಿ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿ ಎಲ್ಲೆಡೆ ಸುದ್ದಿಯಾಗುತ್ತಿದ್ದಾರೆ.
loading...
No comments