ಶಶಿಕಲಾ ಪರಪ್ಪನ ಅಗ್ರಹಾರಕ್ಕೆ ಆಗಮಿಸಿದಾಗ ಏನಾಯ್ತು ?
ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶಕ್ಕೆ ತಲೆ ಬಾಗಿ ಶರಣಾಗಲು ಬಂದ ಶಶಿಕಲಾ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದ್ದು ಪರಪ್ಪನ ಅಗ್ರಹಾರದ ಮುಂದೆ ಪನ್ನೀರ್ ಸೆಲ್ವಂ ಬೆಂಬಲಿಗರು ಶಶಿಕಲಾ ಬೆಂಬಲಿಗರಿಗೆ ಸೇರಿದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. 5 ಸ್ಕಾರ್ಪಿಯೋ , 1 ಇನ್ನೋವಾ ಕಾರು ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದು ಬಂದಿದೆ . ನಂತರದ ಬೆಳವಣಿಗೆಯಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ವಿಶೇಷ ನ್ಯಾಯಾಲಯದ ಎದುರು ಶರಣಾಗಿದ್ದಾರೆ. ಶಶಿಕಲಾ ಜತೆ ಇಳವರಸಿ, ಸುಧಾಕರನ್ ಸಹ ಕೋರ್ಟ್ಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ
loading...
No comments