ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ :ಪೊಲೀಸ್ ಮಹಾನಿರೀಕ್ಷಕ ಪಿ. ಹರಿಶೇಖರನ್
ಮಂಗಳೂರು : ಇನ್ನು ಮುಂದೆ ಫೇಸ್‌ಬುಕ್, ಟ್ವಿಟರ್, ವಾಟ್ಸ್ ಆಪ್, ಇನ್ಸ್ಟಾಗ್ರಾಮ್, ವಿ-ಚಾಟ್, ಸ್ಕೈಪ್ ಇನ್ನಿತರ ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸುವಂತಹ ಸುಳ್ಳು ಸಂದೇಶಗಳನ್ನು ಬಿತ್ತರಿಸಿ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಕೆಲಸಗಳನ್ನು ಮಾಡಿದರೆ, ಐಪಿಸಿ ಕಲಂ ೧೫೩(ಎ) ಹಾಗೂ ಕಲಂ ೬೬(ಎ) ಐ.ಟಿ. ಕಾಯ್ದೆ ಪ್ರಕಾರ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಪಿ. ಹರಿಶೇಖರನ್ ಅವರು ಎಚ್ಚರಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸಮಾಜಘಾತುಕ ವ್ಯಕ್ತಿಗಳು ಫೇಸ್‌ಬುಕ್, ಟ್ವಿಟರ್, ವಾಟ್ಸ್ ಆಪ್, ಇನ್ಸ್ಟಾಗ್ರಾಮ್, ವಿ-ಚಾಟ್, ಸ್ಕೈಪ್ ಇನ್ನಿತರ ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸುವಂತಹ ಸುಳ್ಳು ಸಂದೇಶಗಳನ್ನು ಬಿತ್ತರಿಸಿ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಕೆಲಸಗಳನ್ನು ಮಾಡುತ್ತಿರುವುದು ಕಂಡುಬಂದಿದೆ. ಈ ರೀತಿ ಸಾಮಾಜಿಕ ಜಾಲತಾಣಗಳು ಹಾಗೂ ಬರವಣಿಗೆಗಳ ಮುಖಾಂತರ ಸಂದೇಶಗಳನ್ನು ಕಳುಹಿಸುವುದು ಕಾನೂನಿಗೆ ವಿರುದ್ಧವಾಗಿದ್ದು ಈ ಕುರಿತು ಐಪಿಸಿ, ಕಲಂ ೧೫೩-ಎರಲ್ಲಿ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ
loading...
No comments