Breaking News

ಅಮೇರಿಕಾದಲ್ಲಿ ಅಹಿತಕರ ಘಟನೆಗಳು ಸಂಭವಿಸಿದರೆ ನೀವೇ ಹೊಣೆ’ : ನ್ಯಾಯಾಧೀಶರಿಗೆ ಟ್ರಂಪ್ ಎಚ್ಚರಿಕೆ



 ಅಮೇರಿಕಾ : ಏಳು ಮುಸ್ಲಿಂ ದೇಶಗಳ ಪ್ರಜೆಗಳಿಗೆ ನಿರ್ಬಂಧ ವಿಧಿಸುವ ತಮ್ಮ ಆದೇಶಕ್ಕೆ ತಡೆಯಾಜ್ಞೆ ನೀಡಿದ ನ್ಯಾಯಾಂಗದ ವಿರುದ್ಧ ಕೆಂಡಾಮಂಡಲವಾಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದರಿಂದ ಏನಾದರೂ ಅಹಿತಕರ ಘಟನೆಗಳು ಸಂಭವಿಸಿದರೆ ಅದಕ್ಕೆ ಫೆಡೆರಲ್ ನ್ಯಾಯಾಧೀಶರು ಮತ್ತು ನ್ಯಾಯಾಲಯವೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ನ್ಯಾಯಾಧೀಶರೊಬ್ಬರು ದೇಶವನ್ನು ಇಂಥ ಗಂಡಾಂತರಕ್ಕೆ ಸಿಲುಕಿಸುತ್ತಾರೆ ಎಂಬುವನ್ನು ನಂಬುವುದು ಕಷ್ಟವಾಗಿದೆ. ವಲಸಿಗರಿಂದ ಏನಾದರೂ ಆಪತ್ತು ಬಂದೊದಗಿದರೆ ಅದಕ್ಕೆ  ನ್ಯಾಯಾಧೀಶರು ಮತ್ತು ನ್ಯಾಯಾಂಗ ವ್ಯವಸ್ಥೆಯೇ ಜವಾಬ್ದಾರಿಯಾಗಬೇಕಾಗುತ್ತದೆ ಎಂದು ಟ್ರಂಪ್ ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಕೋರ್ಟ್ ಆದೇಶದಿಂದಾಗಿ ಅಮೆರಿಕ ಪ್ರವೇಶಿಸುವ ವಲಸಿಗರನ್ನು ತುಂಬಾ ಎಚ್ಚರಿಕೆಯಿಂದ ತಪಾಸಣೆ ಮಾಡುವಂತೆ ತಾವು ಸ್ವದೇಶ ಭದ್ರತಾ ಇಲಾಖೆಗೆ ತಿಳಿಸಿರುವುದಾಗಿ ಟ್ರಂಪ್ ಹೇಳಿದ್ದಾರೆ.

loading...

No comments