Breaking News

ಟೋಲ್‌ಗೇಟ್ ವಿವಾದ ಉಡುಪಿಯಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ


ಉಡುಪಿ : ಟೋಲ್‌ಗೇಟ್‌ನಲ್ಲಿ ಸ್ಥಳೀಯರಿಗೆ ಸುಂಕದಲ್ಲಿ ವಿನಾಯಿತಿ ನೀಡಬೇಕು ಎನ್ನುವ ಸಾರ್ವಜನಿಕರ ಹೋರಾಟದ ಕಾವು ತೀವ್ರಗೊಂಡಿದೆ. ಟೋಲ್ ಗೇಟ್ ನಲ್ಲಿ  ಶುಲ್ಕ ಸಂಗ್ರಹಕ್ಕೆ ಅವಕಾಶ ನೀಡಿದ ಜಿಲ್ಲಾಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ . ಜಿಲ್ಲಾಡಳಿತ ಜನಸಾಮಾನ್ಯರ ಸಮಸ್ಯೆಗೆ ಧ್ವನಿಯಾಗುವ ಬದಲು ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಹೇಳಿ ಇಂದು ಉಡುಪಿಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ . ಸ್ಥಳೀಯ ಸಂಘಟನೆಗಳ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ 
ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಮಂಗಳೂರು, ಚಿಕ್ಕಮಗಳೂರು, ಕಾರವಾರ ಜಿಲ್ಲೆಯಿಂದ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. 6 ಇನ್ಸ್‍ಪೆಕ್ಟರ್, 35 ಎಸ್‍ಐ, 25 ಎಎಸ್‍ಐ, 5 ಕೆಎಸ್‍ಆರ್‍ಪಿ, 6 ಡಿಎಆರ್ ಪೊಲೀಸರು, 109 ಮಂದಿ ಹೋಮ್ ಗಾರ್ಡ್‍ಗಳನ್ನ ನಿಯೋಜನೆ ಮಾಡಲಾಗಿದೆ. ಜಿಲ್ಲೆಯಾದ್ಯಂತ 500ಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್‍ಗೆ ನೇಮಕ ಮಾಡಲಾಗಿದೆ.
ಪಡುಬಿದ್ರೆಯ ಪ್ರತಿಭಟನೆಯ ಒಂದು ತುಣುಕು 


loading...

No comments