21ನೇ ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣವಚನ ಸ್ವೀಕಾರ
2ನೇ ಕಿರಿಯ ಸಿಎಂ
ಲಕ್ನೋ: ಉತ್ತರಪ್ರದೇಶದ 21 ನೇ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಾನ್ಶಿರಾಮ್ ಸ್ಮೃತಿ ಭವನದ ಎದುರು ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ರಾಮ್ ನಾಯ್ಕ್ ಯೋಗಿ ಆದಿತ್ಯನಾಥ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ಸಮಾರಂಭದಲ್ಲಿ ಕೇಶವ ಪ್ರಸಾದ್ ಮೌರ್ಯ ಹಾಗೂ ದಿನೇಶ್ ಶರ್ಮಾ ಉಪ ಮುಖ್ಯಮಂತ್ರಿಯಾಗಿ ಹಾಗೂ 43 ಮಂದಿ ಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ನಿತಿನ್ ಗಡ್ಕರಿ, ಮುಲಾಯಂ ಸಿಂಗ್ ಯಾದವ್, ಮುರಳಿ ಮನೋಹರ್ ಜೋಶಿ. ಎಲ್.ಕೆ. ಅಡ್ವಾಣಿ, ಗೃಹ ಸಚಿವ ರಾಜನಾಥ ಸಿಂಗ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ಉಮಾ ಭಾರತಿ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಅಖಿಲೇಶ್ ಯಾದವ್ ಸೇರಿದಂತೆ ಇನ್ನಿತರೆ ಗಣ್ಯಾತಿ ಗಣ್ಯರು ಹಾಜರಿದ್ದರು.
loading...
No comments