ಸೀಜ್ ಮಾಡಿದ್ದ ಅದಿರು ಕದ್ದು ಹೊರದೇಶಕ್ಕೆ ಸಾಗಿಸಿದ ಬಿಜೆಪಿಗೆ ಕಾಂಗ್ರೆಸ್ ವಿರುದ್ಧ ಮಾತನಾಡುವ ನೈತಿಕ ಹಕ್ಕು ಇಲ್ಲ.
ಚಾಮರಾಜನಗರ : ಚಾಮರಾಜನಗರದಲ್ಲಿ ಶುಕ್ರವಾರ ನಡೆದ ಜಿಲ್ಲಾ ಕಾಂಗ್ರೆಸ್ ಮತ್ತು ಬ್ಲಾಕ್ ಕಾಂಗ್ರೆಸ್‍ಗೆ ನೇಮಕಗೊಂಡ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಬಿಜೆಪಿ ವಿರುದ್ಧ ಹರಿಹಾಯ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡ ಮರಿಸ್ವಾಮಿ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನ ಅವರಿಗೆ ಪಕ್ಷದ ಬಾವುಟ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿ ನಂತರ ಮಾತನಾಡಿದ ಯುಟಿ ಖಾದರ್ ಅವರು ಲೋಕಾಯುಕ್ತ ವಶಪಡಿಸಿಕೊಂಡಿದ್ದ ಲಕ್ಷಾಂತರ ಟನ್ ಅದಿರನ್ನು ಕದ್ದು ಹೊರದೇಶಕ್ಕೆ ಸಾಗಿಸಿದ ಬಿಜೆಯವರದ್ದು ಎಂತಹಾ ದೇಶಪ್ರೇಮ ಎಂದರು.
ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮಾಡುವ ನೈತಿಕ ಹಕ್ಕು ಇಲ್ಲ. ಮುಂದಿನ ಚುಣಾವಣೆಯಲ್ಲಿಯೂ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬುದನ್ನು ಅರಿತ ಬಿಜೆಪಿ ನಾಯಕರು ನಮ್ಮ ಸರ್ಕಾರದ ಮೇಲೆ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ, ಇದಕ್ಕೆ ಪ್ರಧಾನ ಮಂತ್ರಿ ಹಾಗೂ ಕೇಂದ್ರ ಮಂತ್ರಿಗಳೂ ಕುಮ್ಮಕ್ಕು ನೀಡುತ್ತಿದ್ದಾರೆ ಎಂದರು.
ಶಾಪಗ್ರಸ್ತ ಜಿಲ್ಲೆ ಎಂಬ ಕಾರಣವೊಡ್ಡಿ ಹಿಂದೆ ಮುಖ್ಯಮಂತ್ರಿಗಳು ಚಾಮರಾಜನಗರಕ್ಕೆ ಭೇಟಿ ನೀಡುತ್ತಿರಲಿಲ್ಲ, ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ ಮೂರೇ ತಿಂಗಳಲ್ಲಿ ಇಲ್ಲಿಗೆ ಭೇಟಿ ನೀಡಿ ಅಂಟಿದ್ದ ಕಳಂಕವನ್ನು ದೂರ ಮಾಡಿದ್ರು. ಜಿಲ್ಲೆಯ ಹಿಂದುಳಿಯುವಿಕೆಗೆ ಹಲವು ಕಾರಣಗಳಿದ್ದರೂ ಜಿಲ್ಲೆಯಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿದರೆ ಎಲ್ಲಾ ರೀತಿಯಲ್ಲಿಯೂ ಅಭಿವೃದ್ಧಿ ಸಾಧಿಸಬಹುದು.ಆರ್ಥಿಕ ಸಬಲೀಕರಣ ಪ್ರತಿಯೊಬ್ಬರ ಗುರಿಯಾಗಬೇಕು ಎಂದರು.
ಇಷ್ಟೇ ಅಲ್ಲದೆ ಆರ್ಥಿಕ, ರಾಜಕೀಯ, ಧಾರ್ಮಿಕ, ಸಾಮಾಜಿಕವಾಗಿ ಸಬಲೀಕರಣ ಹೊಂದಬೇಕು. ಇದಕ್ಕೆ ಮುಖ್ಯವಾಗಿ ಶೈಕ್ಷಣಿಕವಾಗಿ ಕ್ರಾಂತಿಯಾಗಬೇಕು ಎಂದರು. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಉತ್ತಮ ಸಹಕಾರದಿಂದ ಕೆಲಸ ಮಾಡ್ಬೇಕಿದೆ. ಜನರೂ ಸಹ ಶಾಂತಿ ಸೌಹಾರ್ದತೆಯಿಂದ ಬಾಳಬೇಕು. ಜನರು ಶಾಂತಿಯನ್ನು ಕೈಯಲ್ಲಿ ಹಿಡಿದುಕೊಂಡ್ರೆ, ಅಭಿವೃದ್ಧಿಯನ್ನು ಅವರ ಕಾಲಿನ ಬುಡಕ್ಕೆ ತರುತ್ತೇವೆ ಎಂದರು

loading...
No comments