Breaking News

ಡಬ್ಬಿಂಗ್ ಸಿನಿಮಾಗಳ ಬಗ್ಗೆ ಶಿವರಾಜ್ ಕುಮಾರ್ ಹೇಳಿದ್ದೇನು.?

ಮಂಗಳೂರು : ಚಿತ್ರನಟ ಜಗ್ಗೇಶ್ ನಂತರ ಈಗ ಹಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಡಬ್ಬಿಂಗ್ ಸಿನಿಮಾಗಳ ವಿರುದ್ಧ ಧ್ವನಿ ಎತ್ತಿದ್ದಾರೆ. ಕನ್ನಡದಲ್ಲಿಯೇ ಉತ್ತಮ ಚಿತ್ರಕಥೆಗಳಿದ್ದು ಕನ್ನಡ ಚಿತ್ರರಂಗಕ್ಕೆ ಡಬ್ಬಿಂಗ್ ಚಿತ್ರಗಳ ಅವಶ್ಯಕತೆಯಿಲ್ಲ ಎಂದಿದ್ದಾರೆ.

ತುಳು ಭಾಷೆಯ ಚಿತ್ರವಾದ 'ಕಟಪಾಡಿ ಕಟ್ಟಪ್ಪ' ಸಂಗೀತ ರೆಕಾರ್ಡಿಂಗ್ ಗೆ ಚಾಲನೆ ನೀಡಿ ಮಾತನಾಡಿದ ಶಿವರಾಜ್ ಕುಮಾರ್ ನಾನು ಮೊದಲಿನಿಂದಲೂ ಡಬ್ಬಿಂಗ್ ವಿರೋಧಿಸುತ್ತಾ ಬಂದಿದ್ದು ಈಗಲೂ ಡಬ್ಬಿಂಗ್ ವಿರೋಧಿಸುತ್ತೇನೆ ಎಂದಿದ್ದಾರೆ. ಕನ್ನಡ ಸಿನಿಮಾಗಳನ್ನು ನೋಡಿ ಕನ್ನಡಿಗರನ್ನು ಬೆಂಬಲಿಸಿ ಎಂದರು. ಇದೇ ಸಂದರ್ಭದಲ್ಲಿ ಶಿವರಾಜ್ ಕುಮಾರ್ ಕರಾವಳಿಯ ವಿವಾದಾತ್ಮಕ ಯೋಜನೆ ಎತ್ತಿನಹೊಳೆಯ ಬಗ್ಗೆ ಮಾತನಾಡಿ, ಎತ್ತಿನಹೊಳೆ ಯೋಜನೆಯ ವಿರುದ್ಧ ಕರಾವಳಿಗರ ಹೋರಾಟಕ್ಕೆ ಕನ್ನಡ ಚಿತ್ರರಂಗದಿಂದ ಸಂಪೂರ್ಣ ಬೆಂಬಲವಿದೆ. ಹೋರಾಟ ಅನಿವಾರ್ಯವಾದರೆ ಕರಾವಳಿ ಜನರ ಜೊತೆ ನಾವು ಇದ್ದೇವೆ ಎಂದು ಕರಾವಳಿಗರಿಗೆ ಭರವಸೆ ನೀಡಿದರು.

ಇದಕ್ಕಿಂತ ಮೊದಲು ಡಬ್ಬಿಂಗ್ ವಿರೋಧಿಸಿ ಹೇಳಿಕೆ ನೀಡಿದ್ದ ನಟ ಜಗ್ಗೇಶ್ ಕನ್ನಡಕ್ಕೆ ಡಬ್ಬಿಂಗ್ ಸಿನಿಮಾಗಳ ಅವಶ್ಯಕತೆ ಇಲ್ಲ. ಒಂದು ವೇಳೆ ಡಬ್ಬಿಂಗ್ ಸಿನಿಮಾ ಪ್ರದರ್ಶಿಸಿದರೆ, ಜೈಲಿಗೆ ಹೋದರೂ ಪರವಾಗಿಲ್ಲ ಡಬ್ಬಿಂಗ್ ಸಿನಿಮಾ ಪ್ರದರ್ಶಿಸುವ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚೋದಾಗಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

loading...

No comments