Breaking News

ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟಕ್ಕೂ ಇನ್ನು ಮುಂದೆ ಆಧಾರ್ ಕಾರ್ಡ್ ಕಡ್ಡಾಯ.

ನವದೆಹಲಿ : ಇನ್ನು ಮುಂದೆ ಮಧ್ಯಾಹ್ನದ ಬಿಸಿಯೂಟಕ್ಕೂ ವಿದ್ಯಾರ್ಥಿಗಳು ಆದಾರ್ ಕಾರ್ಡ್ ಹೊಂದುವುದು ಕಡ್ಡಾಯವಾಗಿದೆ.ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಹೊಸ ನಿಯಮದ ಪ್ರಕಾರ ಮಧ್ಯಾಹ್ನ ಬಿಸಿಯೂಟ ಯೋಜನೆಯಲ್ಲಿ ಆಹಾರ ಪಡೆಯಲು ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್ ಸಂಖ್ಯೆಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಜೊತೆಗೆ ಆಹಾರ ತಯಾರಕರು ಮತ್ತು ಸಹಾಯಕರು ಕೂಡ ಆಧಾರ್ ಕಾರ್ಡ್ ಹೊಂದಿರಬೇಕಾಗಿದೆ.
ವಿದ್ಯಾರ್ಥಿಗಳಿಗೆ ತಮ್ಮ ಆಧಾರ್ ಕಾರ್ಡ್ ಸಂಖ್ಯೆ ಸಲ್ಲಿಸಲು ಜೂನ್ 30ರ ವರೆಗೆ ಸಮಯ ನೀಡಲಾಗಿದ್ದು, ಈ ಹೊಸ ನಿಯಮದಿಂದಾಗಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಸಾಧ್ಯವಾಗಲಿದೆ ಅಲ್ಲದೆ ಯೋಜನೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ತಮ್ಮ ಅಧಿಸೂಚನೆಯಲ್ಲಿ ತಿಳಿಸಿದೆ.
2015-16ನೇ ಸಾಲಿನಲ್ಲಿ ದೇಶಾದ್ಯಂತ ಒಟ್ಟು 11.5ಲಕ್ಷ ಶಾಲೆಗಳಲ್ಲಿ 10.03ಕೋಟಿ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಯೋಜನೆಯ ಲಾಭ ಪಡೆದಿದ್ದಾರೆ. ಜಮ್ಮು ಮತ್ತು ಕಾಶ್ಮೀರ, ಮೇಘಾಲಯ ಮತ್ತು ಅಸ್ಸಾಂ ರಾಜ್ಯಗಳನ್ನು ಹೊರತು ಪಡಿಸಿ ದೇಶದ ಉಳಿದ ಎಲ್ಲಾ ರಾಜ್ಯಗಳಿಗೂ ಈ ಹೊಸ ನಿಯಮ ಅನ್ವಯವಾಗಲಿದೆ. ಎಲ್ಲಾ ಶಾಲೆಗಳಿಗೂ ಈ ಬಗ್ಗೆ ಅಧಿಸೂಚನೆ ಕಳುಹಿಸಲಾಗಿದೆ.
loading...

No comments