ಉತ್ತರ ಪ್ರದೇಶ ಮುಖ್ಯಮಂತ್ರಿ ಆಗಿ ಯೋಗಿ ಆದಿತ್ಯನಾಥ್ ಆಯ್ಕೆ
ಉತ್ತರಪ್ರದೇಶ ವಿಧಾನ ಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಬಿಜೆಪಿ 312 ಸೀಟುಗಳನ್ನು ಬಾಚಿಗೊಂಡಿತ್ತು ನಂತರದ ಬೆಳವಣಿಗೆಯಲ್ಲಿ ಉತ್ತರ ಪ್ರದೇಶ ಮುಖ್ಯ ಮಂತ್ರಿ ಸ್ಥಾನಕ್ಕೆ ಕೇಂದ್ರ ಸಚಿವ ಮನೋಜ್ ಸಿನ್ಹಾ ,ರಾಜ್ಯ ಘಟಕದ ಅಧ್ಯಕ್ಷ ಕೇಶವ ಪ್ರಸಾದ್ ಮೌರ್ಯ ಮತ್ತು ಗೊರಕ್ಪುರ್ ಬಿಜೆಪಿ ಮುಖಂಡ ಯೋಗಿ ಆದಿತ್ಯನಾಥ್ ಹೆಸರು ಕೇಳಿಬಂದಿತ್ತು .ಇಂದು ನಡೆದ ಯುಪಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಉತ್ತರ ಪ್ರದೇಶ ಬಿಜೆಪಿಯ ಫೈರ್ ಬ್ರಾಂಡ್ ಆಗಿರುವ ಯೋಗಿ ಆದಿತ್ಯನಾಥ್ ಅವರನ್ನು ಆಯ್ಕೆ ಮಾಡಲಾಗಿದೆ .ನಾಳೆ ಲಕ್ನೋನಲ್ಲಿ ಸಂಜೆ ೫ ಘಂಟೆಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಲಾಗಿದೆ
loading...
No comments