ರಕ್ಷಣಾ ಸಚಿವ ಸ್ಥಾನದ ಹೊಣೆ ಹೊತ್ತ ಅರುಣ್ ಜೇಟ್ಲಿ
ನವದೆಹಲಿ : ರಕ್ಷಣಾ ಸಚಿವ ಸ್ಥಾನಕ್ಕೆ ಮನೋಹರ್ ಪರಿಕರ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಗೀಕರಿಸಿದ್ದು, ರಕ್ಷಣೆಯ ಹೊಣೆಯನ್ನು ವಿತ್ತಸಚಿವ ಅರುಣ್ ಜೇಟ್ಲಿ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.
ಪರಿಕರ್ ಅವರು ಗೋವಾ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
'ರಕ್ಷಣಾ ಸಚಿವ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದು, ಪ್ರಧಾನಿ ಕಚೇರಿಗೆ ಕಳುಹಿಸಲಾಗಿದೆ. ಸಂಪುಟ ಸಚಿವರ ಜತೆಗೆ ನಾಳೆ ಸಂಜೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದೇನೆ' ಎಂದು ಪರಿಕರ್ ಸೋಮವಾರ ತಿಳಿಸಿದ್ದಾರೆ.
-toi
loading...
No comments