Breaking News

ಖಾಸಗಿ ಶಾಲೆ ಉದ್ಘಾಟಿಸುವುದಿಲ್ಲ ಎಂದು ಶಪಥ ಮಾಡಿದ ಶಾಸಕ
ಬಾಗಲಕೋಟ: ಖಾಸಗಿ ಶಿಕ್ಷಣ ಸಂಸ್ಥೆಗಳ ಹೊಸ ಶಾಲೆ ಉದ್ಘಾಟನೆಗೆ ಹೋಗುವುದಿಲ್ಲ ಎಂದು ಬೀಳಗಿ‌ ಶಾಸಕ ಜೆ.ಟಿ.ಪಾಟೀಲ ಶಪಥ ಮಾಡಿದ್ದಾರೆ.

ಕನ್ನಡ ಶಾಲೆಗಳ ಸುಧಾರಣೆಗೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟದಲ್ಲಿ ಸೋಮವಾರ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿದ ಶಾಸಕ ಪಾಟೀಲರಿಗೆ, ಖಾಸಗಿ ಶಾಲೆಗಳಿಗಿಂತ ಕನ್ನಡ ಶಾಲೆಗಳ ಅಭಿವೃದ್ಧಿಗೆ ಸರಕಾರ ಗಮನ ಹರಿಸಬೇಕು ಎಂದು ಕರವೇ ಕಾರ್ಯಕರ್ತರು ಆಗ್ರಹಿಸಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳ ಹೊಸ ಶಾಲೆ ಉದ್ಘಾಟನೆ ಸಮಾರಂಭಕ್ಕೆ ಹೋಗುವುದಿಲ್ಲ ಎಂದು ಶಾಸಕ ಪಾಟೀಲ ಈ ಸಂದರ್ಭದಲ್ಲಿ ಶಪಥ ಮಾಡಿದರು.

loading...

No comments