Breaking News

ಬಾಳಿಗಾ ಕೊಲೆ ಪ್ರಕರಣ ಮರು ತನಿಖೆಗೆ ಅರ್ಜಿ



ಮಂಗಳೂರು : ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಕೃತ್ಯಕ್ಕೆ ಸಂಬಂಧಿಸಿದಂತೆ ಕುಟುಂಬಿಕರು ಇದೀಗ ಪ್ರಕರಣದ ಮರುತನಿಖೆ ನಡೆಸುವಂತೆ ಕೋರಿ ಸೆಕೆಂಡ್ ಜ್ಯೂಡಿಷಿಯಲ್ ಮ್ಯಾಜಿಸ್ಟ್ರೇಟಿನ ಪ್ರಥಮ ದರ್ಜೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ವಿನಾಯಕ ಬಾಳಿಗಾ ಸಹೋದರಿ ಅನುರಾಧಾ ಈ ಅರ್ಜಿ ಸಲ್ಲಿಸಿ ತಮಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿದ್ದಾರೆ. ಸಹೋದರನ ಕೊಲೆ ಪ್ರಕರಣದ ಆಳವನ್ನು ಬೇಧಿಸಿ ಪೊಲೀಸರು ತನಿಖೆ ನಡೆಸಲು ಮುಂದಾಗುತ್ತಿಲ್ಲ ಎಂದು ಅರ್ಜಿಯಲ್ಲಿ ದೂರಿರುವ ಅನುರಾಧಾ, ಈ ಪ್ರಕರಣದಲ್ಲಿ ಶಾಮೀಲಾಗಿರುವ ಎಲ್ಲಾ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಎಪ್ರಿಲ್ 22ರಂದು ಈ ಕುರಿತ ತಕರಾರು ಅರ್ಜಿಯನ್ನು ಸಲ್ಲಿಸುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ.

loading...

No comments