ಪೋಸ್ಟರ್‍ನಲ್ಲಿ ಫೋಟೋ ಮಾಯ ವಿಶ್ವನಾಥ್ ಕೆಂಡಾಮಂಡಲ
ಮೈಸೂರು:ನಂಜನಗೂಡು-ಗುಂಡ್ಲುಪೇಟೆ ಉಪಚುನಾವಣೆಗೆ ಸಂಬಂಧಿಸಿದಂತೆ ಪೋಸ್ಟರ್ ಹಾಗೂ ಜಾಹೀರಾತುಗಳಲ್ಲಿ ತಮ್ಮ ಭಾವಚಿತ್ರ ಕೈ ಬಿಟ್ಟಿರುವುದಕ್ಕೆ ವಿಶ್ವನಾಥ್ ಗರಂ ಆಗಿದ್ದಾರೆ.
ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ.40 ವರ್ಷಗಳಿಂದ ಕಾಂಗ್ರೆಸ್ ಪಕ್ಷವನ್ನು ನಂಬಿ ಬದುಕಿದವನು. ನನ್ನ ರಾಜಕೀಯ ಜೀವನದಲ್ಲಿ ಇಂತಹ ಅದೆಷ್ಟೋ ಮುಖ್ಯಮಂತ್ರಿಗಳನ್ನು ಕಂಡಿದ್ದೇನೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಹೆಸರು ಹೇಳದೆಯೇ ಆಕ್ರೋಶ ವ್ಯಕ್ತಪಡಿಸಿದರು. ಪೋಸ್ಟರ್‍ಗಳಲ್ಲಿ ಬೇಕೆಂದೇ ನನ್ನ ಚಿತ್ರಗಳನ್ನು ಹಾಕಿಲ್ಲ. ಇದು ನಿಜಕ್ಕೂ ಉಡಾಫೆ. ಇಂತಹ ಉಡಾಫೆ, ಅಹಂಕಾರವನ್ನು ಬಿಡದಿದ್ದರೆ ಮುಂದಿನ ಚುನಾವಣೆಯಲ್ಲಿ ಜನರೇ ಪಾಠ ಕಲಿಸುತ್ತಾರೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷವನ್ನು ಇವರು ಅದೆಲ್ಲಿಗೆ ಕೊಂಡೊಯ್ಯುತ್ತಿದ್ದಾರೆ ಎನ್ನುವುದೇ ಗೊತ್ತಾಗಿಲ್ಲ. ಮುಂದಿನ ಚುನಾವಣೆಯಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದು ಟಾಂಗ್ ನೀಡಿದರು.
ಜಾಹೀರಾತು ಹಾಗೂ ಪೋಸ್ಟರ್‍ಗಳಲ್ಲಿ ವಿಶ್ವನಾಥ್ ಅವರ ಭಾವಚಿತ್ರ ಕೈಬಿಟ್ಟಿರುವುದಕ್ಕೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಕೂಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿರಿಯ ಮುಖಂಡರನ್ನು ಹೀಗೇ ನಡೆಸಿಕೊಂಡರೆ ಉಪಚುನಾವಣೆಯಲ್ಲಿ ಪಕ್ಷದ ವಿರುದ್ಧ ನಿಲ್ಲಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ಮುಖ್ಯಮಂತ್ರಿಗಳಿಗೆ ರವಾನಿಸಿದ್ದಾರೆ.
loading...
No comments