Breaking News

ಬಿಜೆಪಿಯವರು ಪುಕ್ಸಟ್ಟೆ ಪ್ರಚಾರಕ್ಕಾಗಿ ಧರಣಿ ನಡೆಸುತ್ತಿದ್ದಾರೆ ಸಿಎಂ



ಬೆಂಗಳೂರು : ಅಧಿವೇಶನ ನಡೆಸಲು ಅವಕಾಶ ಕೊಡದೆ ಪ್ರಚಾರಕ್ಕಾಗಿ ಬಿಜೆಪಿಯವರು ಧರಣಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ಟೀಕಿಸಿದರು.   ಜೆಡಿಎಸ್ ಸೇರಿದಂತೆ ಉಳಿದ ಪಕ್ಷಗಳ ಶಾಸಕರು ಅಧಿವೇಶನ ನಡೆಯಬೇಕು, ಬಜೆಟ್ ಮೇಲೆ ಚರ್ಚೆ ಆಗಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಆದರೆ ಬಿಜೆಪಿ ಶಾಸಕರು ನಕಲಿ ಡೈರಿ ಬಗ್ಗೆ ಚರ್ಚೆಯಾಗಬೇಕೆಂದು ಪಟ್ಟು ಹಿಡಿದು ಧರಣಿ ನಡೆಸುತ್ತಿರುವುದು ಸರಿಯಲ್ಲ ಎಂದರು.
ಬಿಜೆಪಿಯವರು ಎಷ್ಟೇ ತಿಪ್ಪರಲಾಗ ಹಾಕಿದರೂ ಜನ ನಂಬುವುದಿಲ್ಲ. ರಾಜಕೀಯ ಲಾಭಕ್ಕಾಗಿ ಸದನದ ಕಾರ್ಯಕಲಾಪಗಳಿಗೆ ಅಡ್ಡಿಪಡಿಸುತ್ತಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುತ್ತೇವೆಂಬ ಭ್ರಮೆಯಲ್ಲಿದ್ದಾರೆ, ಅವರ ಅಪ್ಪರಾಣೆಗೂ ಅವರು ಗೆದ್ದು ಅಧಿಕಾರಕ್ಕೆ ಬರುವುದಿಲ್ಲ ಹಲವು ಆರೋಪಗಳನ್ನು ಹೊತ್ತು ಜೈಲಿಗೆ ಹೋಗಿ ಬಂದವರು ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ನಾಯಕರು, ಮುಖಂಡರು ಹಲವು ಕ್ರಿಮಿನಲ್ ಕೇಸ್‍ಗಳನ್ನು ಎದುರಿಸುತ್ತಿದ್ದು, ಇನ್ನೂ ಇತ್ಯರ್ಥವಾಗಿಲ್ಲ. ಆದರೂ ನಕಲಿ ಡೈರಿ ವಿಚಾರ ಮುಂದಿಟ್ಟುಕೊಂಡು ಧರಣಿ ನಡೆಸಲು ನಾಚಿಕೆಯಾಗುವುದಿಲ್ಲವೇ. ಸಭಾಧ್ಯಕ್ಷರು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದರು.  ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ವಕೀಲರಾಗಿದ್ದಾರೆ. ಅವರಿಗೆ ಕಾನೂನು ಅರಿವು ಗೊತ್ತಿಲ್ಲವೇ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.


loading...

No comments