Breaking News

ರೈತರು ಸಂಕಷ್ಟದಲ್ಲಿದ್ದು ಸಾಲ ಮನ್ನಾ ಮಾಡುವಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ.

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನ ಮಾಡಿ ಎಂದು ಮನವಿ ಮಾಡಿರೋ ಬಗ್ಗೆ ವರದಿಯಾಗಿದೆ. ಕರ್ನಾಟಕದ 160ಕ್ಕೂ ಹೆಚ್ಚು ತಾಲೂಕುಗಳು ಬರ ಪೀಡಿತವಾಗಿದೆ, ಅಲ್ಲಿನ ರೈತರು ತೀವ್ರ ಸಂಕಷ್ಟದಲ್ಲಿದ್ದು ಸಾಲ ಮರುಪಾವತಿ ಮಾಡುವಂತಹ ಸ್ಥಿತಿಯಲ್ಲಿ ಇಲ್ಲ.
ಕೇಂದ್ರ ಸರ್ಕಾರವೇನಾದರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡಿದ್ದೇ ಆದಲ್ಲಿ ಉಳಿದ ಅರ್ಧದಷ್ಟು ಸಾಲವನ್ನು ರಾಜ್ಯ ಸರ್ಕಾರ ಮನ್ನಾ ಮಾಡಲಿದೆ ಎಂದು ಹೇಳಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರ ಹೈದರಾಬಾದ್ ಕರ್ನಾಟಕದ ಭಾಗಕ್ಕೆ 1000ಕೋಟಿ ಅನುದಾನ ನೀಡುತ್ತಿದ್ದು ಮುಂದಿನ ಬಜೆಟ್ ನಲ್ಲಿ ಅದನ್ನು 1500ಕೋಟಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿಯವರಲ್ಲಿ ಮನವಿ ಮಾಡಿದ್ದಾರೆ.
loading...

No comments