Breaking News

ಮಾಜಿ ಪ್ರಧಾನಿ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಎಫ್‌ಐಆರ್‌ ದಾಖಲು



ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡರ ಬಗ್ಗೆ ಜಗದೀಶ ಎಂಬಾತ ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ್ದಾರೆಂದು ಆರೋಪಿಸಿ ಜೆಡಿಎಸ್‌ ಯುವ ಮೋರ್ಚಾ ಸದಸ್ಯರು ಸೈಬರ್‌ ಕ್ರೈಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಜಗದೀಶ ಗೌಡ ಅಲಿಯಾಸ್‌ ಜಗ್ಗಿ ಎಂಬಾತ ಮಾ.24ರಂದು ತನ್ನ ಫೇಸ್‌ಬುಕ್‌ನಲ್ಲಿ, ದೇವಗೌಡರು ದೇಶ ವಿರೋಧಿ ಎಂದು ವ್ಯಾಖ್ಯಾನಿಸಿ ಅವಹೇಳಕಾರಿಯಾಗಿ ಪೋಸ್ಟ್‌ ಮಾಡಿದ್ದಾರೆ. ಅಲ್ಲದೇ, ಅವಹೇಳನಕಾರಿ ಬರಹಗಳನ್ನು ಟ್ವಿಟರ್‌, ವಾಟ್ಸ್‌ಆ್ಯಪ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದ್ದಾರೆ. ಆ ವ್ಯಕ್ತಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಆತನ ಸಾಮಾಜಿಕ ಜಾಲತಾಣಗಳ ಅಕೌಂಟ್‌ಗಳನ್ನು ಬ್ಲಾಕ್‌ ಮಾಡಬೇಕು ಎಂದು ದೂರಿನಲ್ಲಿ ಎಚ್‌.ಎಂ ರಮೇಶಗೌಡ ಕೋರಿದ್ದಾರೆ. ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

loading...

No comments