Breaking News

ಸಾಲ ಬಾದೆ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ



ತುಮಕೂರು  :  ಕ್ರಿಮಿನಾಶಕ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಮರಿದಾಸನಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ಗ್ರಾಮದ ಟಿ.ಡಿ.ಅನಿಲ್ ಕುಮಾರ್(40) ಆತ್ಮಹತ್ಯೆ ಮಾ‌ಡಿಕೊಂಡಿರುವ ದುರ್ದೈವಿ. ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥರಾದ ಅವರನ್ನು ಕುಟುಂಬ ಸದಸ್ಯರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೆ ತುಮಕೂರಿನಲ್ಲಿ ಮೃತಪಟ್ಟಿದ್ದಾರೆ.

10 ಎಕರೆ ಜಮೀನಿನಲ್ಲಿ ಈಚೆಗೆ ಕೊಳವೆ ಬಾವಿ ಕೊರೆಸಲಾಗಿತ್ತು. ಕೊಳವೆ ಬಾವಿಯಲ್ಲಿ ನೀರು ಬತ್ತಿ ಹೋಗಿತ್ತು. ಜಮೀನಿನ ಮೇಲೆ ವೈ.ಎನ್.ಹೊಸಕೋಟೆ ಕೆನರಾ ಬ್ಯಾಂಕ್‌ನಲ್ಲಿ 4 ಲಕ್ಷ ರೂ. ಸಾಲ ತೆಗೆದುಕೊಳ್ಳಲಾಗಿದ್ದು, ಸಾಲದ ಹೊರೆ ಹೆಚ್ಚಿ ಅನಿಲ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

loading...

No comments