Breaking News

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ


ನವದೆಹಲಿ : ರಾಜಧಾನಿ ದೆಹಲಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದೆ. ಬುಧವಾರದಂದು ದೆಹಲಿಯ ಬಿಂದಾಪುರ್ ಪ್ರದೇಶದಲ್ಲಿ ಲಿಫ್ಟ್ ಕೊಡುವ ನೆಪದಲ್ಲಿ 15ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಯುವಕರ ಗುಂಪು ಸಾಮೂಹಿಕ ಅತ್ಯಾಚಾರ ಮಾಡಿದೆ.

ಬುಧವಾರ ರಾತ್ರಿ 8:30ರ ಸುಮಾರಿಗೆ ತರಗತಿ ಮುಗಿಸಿಕೊಂಡು ವಾಪಾಸಾಗುತ್ತಿದ್ದ 10ನೇ ತರಗತಿ ವ್ಯಾಸಾಂಗ ಮಾಡುತ್ತಿರುವ ಬಾಲಕಿಯನ್ನು ಲಿಫ್ಟ್ ಕೊಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡ ಯುವಕರ ಗುಂಪು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಆಕೆಯ ಮನೆ ಸಮೀಪ ಇಳಿಸಿ ಪರಾರಿಯಾಗಿದ್ದರು.

ಅತ್ಯಾಚಾರ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಮಾಡಿದ ಯುವಕರೂ ಅಪ್ರಾಪ್ತರಾಗಿದ್ದು ಬಾಲಕಿಯ ಪರಿಚಯಸ್ಥರೆ ಈ ಕೃತ್ಯ ಎಸಗಿರೋದಾಗಿ ಎಂದು ಪೋಲೀಸರು ತಿಳಿಸಿದ್ದಾರೆ. ಬಾಲಕಿ ದೀನ ದಯಾಳ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

loading...

No comments