Breaking News

ಕುಮಾರ ಸ್ವಾಮಿಗೆ ಜ್ವರ ವಿಶ್ರಾಂತಿಗೆ ಮೊರೆ


ಮೈಸೂರು :ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಣ ತೊಟ್ಟಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸತತ ರಾಜಕೀಯ ಚಟುವಟಿಕೆಗಳಿಂದ ಆಯಾಸಗೊಂಡು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ.
ಇಲ್ಲಿನ ಹೊಟೇಲ್‌ವೊಂದರಲ್ಲಿ ವಿಶ್ರಾಂತಿ ಪಡೆಯುತ್ತಿರುವ ಅವರನ್ನು ವೈದ್ಯರು ಪರೀಕ್ಷಿಸಿ, ಇನ್ನಷ್ಟು ಕೆಲಕಾಲ ವಿಶ್ರಾಂತಿ ಪಡೆಯುವಂತೆ ಸೂಚನೆ ನೀಡಿದ್ದಾರೆ.
ಕಳೆದ ರಾತ್ರಿಯಿಂದಲೂ ಅವರು ಜ್ವರದಿಂದ ಬಳಲುತ್ತಿದ್ದಾರೆ. ಇಂದು ಬೆಳಿಗ್ಗೆ ನಡೆಸಬೇಕಿದ್ದ ಪತ್ರಿಕಾಗೋಷ್ಠಿಯನ್ನು ಸಹ ರದ್ದುಪಡಿಸಿದ್ದಾರೆ.


loading...

No comments