Breaking News

ಯೋಗಿ ಆಯ್ಕೆ ಸಮರ್ಪಕವಲ್ಲ:ಖರ್ಗೆ


ಯಾದಗಿರಿ:ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ ಅವರ ಆಯ್ಕೆ ಒಂದು ತಪ್ಪು ಆಯ್ಕೆಯಾಗಿದೆ ಎಂದು ಲೋಕಸಭೆಯ ಕಾಂಗ್ರೆಸ್ ಪಕ್ಷದ ಸಂಸದಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಉತ್ತರ ಪ್ರದೇಶದಲ್ಲಿ ಬಹುಮತ ಪಡೆದಿರುವುದರಿಂದ ಮುಖ್ಯಮಂತ್ರಿ ಆಯ್ಕೆ ಆ ಪಕ್ಷದ ಆಂತರಿಕ ವಿಚಾರವಾಗಿದ್ದರೂ, ಯೋಗಿ ಆದಿತ್ಯನಾಥ ಅವರು ಈ ಹಿಂದೆ ತಮ್ಮ ಕಟ್ಟರ ಹಿಂದೂ ನಾಯಕರಾಗಿ ತಮ್ಮ ಪ್ರಭಾವ ಬೀರಿದ್ದು, ಅನೇಕ ಬಾರಿ ಸಂವಿಧಾನ ವಿರೋಧಿ ಹೇಳಿಕೆ ನೀಡುವ ಮೂಲಕ ಹಿಂಸೆಗಳಿಗೆ ಪ್ರಚೋದನೆ ನೀಡಿದ್ದಾರೆ.ಇದು ಧ್ರುವಿಕರಣದ ರಾಜಕೀಯದ ಉದ್ದೇಶದಿಂದ ಮಾಡಲಾದ ವ್ಯವಸ್ಥೆ ಎನಿಸುತ್ತದೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂಥ ತಪ್ಪುಗಳು ನಡೆಯುವುದು ಸಹಜ ಎಂಬುವುದಕ್ಕೆ ಉತ್ತರ ಪ್ರದೇಶ ಸಿಎಂ ಆಯ್ಕೆಯೇ ಸಾಕ್ಷಿ ಎಂದರು.
ಬಹುಮತ ಪಡೆದ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಗಳಾಗಿ ನಡೆಸುವ ಆಡಳಿತವನ್ನು ಭವಿಷ್ಯದಲ್ಲಿ ಕಾದು ನೋಡಬೇಕಾಗಿದ್ದು, ಜನಪರ ಆಡಳಿತ ನೀಡುವಲ್ಲಿ ಅವರು ಸಫಲರಾದರೇ ಕಾಂಗ್ರೆಸ್ ಪಕ್ಷ ಅವರಿಗೆ ಸರ್ವ ರೀತಿಯ ಬೆಂಬಲ ನೀಡಲಿದೆ ಎಂದರು.
ಗೋವಾ ರಾಜ್ಯಪಾಲರಿಂದ ಗೃಹ ಸಚಿವರ ನಿರ್ದೇಶನ ಪಾಲನೆ:ಗೋವಾದಲ್ಲಿ ಕಾಂಗ್ರೆಸ್ ಪಕ್ಷ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಬಿಜೆಪಿಯ ಮನೋಹರ ಪರಿಕ್ಕರ್ ಅವರಿಗೆ ಸರ್ಕಾರ ರಚಿಸಲು ಆಹ್ವಾನಿಸುವ ಮೂಲಕ ಅಲ್ಲಿನ ರಾಜ್ಯಪಾಲರು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‍ರ ಆದೇಶವನ್ನು ಪಾಲಿಸಿದ್ದಾರೆ ಎಂದು ಆಪಾದಿಸಿದರು.
loading...

No comments