Breaking News

ಬಿಜೆಪಿ ನಡೆ ಪ್ರಜಾಪ್ರಭುತ್ವಕ್ಕೆ ಮಾರಕ : ಮಲ್ಲಿಕಾರ್ಜುನ ಖರ್ಗೆ


ಬೆಂಗಳೂರು:ಅಧಿಕಾರದ ಗದ್ದುಗೆ ಏರಲು  ರಾಜ್ಯಪಾಲರ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಣಿಪುರ ಮತ್ತು ಗೋವಾದಲ್ಲಿ ಅಧಿಕಾರ ಹಿಡಿಯಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಅವರ ತಂತ್ರಗಾರಿಕೆಯಿಂದ ವಾಮಮಾರ್ಗದ ಮೂಲಕ ಅಧಿಕಾರಕ್ಕೇರಲು ಬಿಜೆಪಿ ಯತ್ನಿಸುತ್ತಿದೆ. ಬಿಜೆಪಿ ಅವರ ನಡೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಲಿದೆ ಎಂದು ವಾಗ್ದಾಳಿ ನಡೆಸಿದರು. ಗೋವಾ ಮತ್ತು ಮಣಿಪುರದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನ ಗೆದ್ದಿದೆ. ಆದರೆ ಅಧಿಕಾರ ನಡೆಸಲು ಕಾಂಗ್ರೆಸ್‍ಗೆ ಹಕ್ಕಿದೆ. ಬಿಜೆಪಿ ಅವರು ಕೇಂದ್ರದ ಪ್ರಭಾವ ಬಳಸಿ ಅಧಿಕಾರ ನಡೆಸಲು ಮುಂದಾಗಿರುವುದು ದುರದೃಷ್ಟಕರ. ಪಕ್ಷೇತರ ಶಾಸಕರನ್ನು ಬೆದರಿಸಿ ಬೆಂಬಲ ಪಡೆಯುವ ಪ್ರಯತ್ನ ಮಾಡಿದ್ದಾರೆ ಎಂದು ಕಿಡಿಕಾರಿದರು.
loading...

No comments