ನನ್ನ ನೇತೃತ್ವದಲ್ಲೇ ಚುನಾವಣೆ ಮರಳಿ ಕಾಂಗ್ರೆಸ್ ಅಧಿಕಾರಕ್ಕೆ
ಬೆಂಗಳೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗಲಿದೆ ಎನ್ನುವುದೆಲ್ಲ ಊಹಾಪೋಹ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂದಿನ ವಿಧಾನಸಭಾ ಚುನಾವಣೆಯನ್ನು ನನ್ನ ನೇತೃತ್ವದಲ್ಲೇ ಎದುರಿಸಲಾಗುವುದು ಎಂದು ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.
ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಏನೇ ಇರಲಿ ಕರ್ನಾಟಕದ ಜನ, ರಾಜಕೀಯ ಪರಿಸ್ಥಿತಿ ವಿಭಿನ್ನವಾದುದು. ಮುಂದಿನ ವಿಧಾನಸಭಾ ಚುನಾವಣೆಯನ್ನು ತಮ್ಮ ನೇತೃತ್ವದಲ್ಲಿ ಎದುರಿಸಲಾಗುವುದು. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು. ನಂತರ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದು ಹೇಳಿದರು.
ಪತ್ರಿಕಾ ಸಂಪಾದಕರುಗಳೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಅವಧಿಗೆ ಮುನ್ನ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎನ್ನುವುದು ಊಹಾಪೋಹ. ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಪೂರೈಸುತ್ತೇನೆ. ಆನಂತರವೇ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಬಗ್ಗೆ ಯಾರಿಗೂ ಯಾವುದೇ ಅನುಮಾನ ಬೇಡ ಎಂದು ಹೇಳಿದರು.
loading...
No comments