Breaking News

ಪಾರ್ವತಮ್ಮ ರಾಜ್‍ಕುಮಾರ್ ಆರೋಗ್ಯದಲ್ಲಿ ಏರು ಪೆರು ಐಸಿಯುನಲ್ಲಿ ಚಿಕಿತ್ಸೆ


ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕಿ  ಪಾರ್ವತಮ್ಮ ರಾಜ್ ಕುಮಾರ್,  ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆ ಮಧ್ಯರಾತ್ರಿ ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾರ್ವತಮ್ಮ ಅವರು ತೀವ್ರ ಅಸ್ವಸ್ಥರಾಗಿದ್ದು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಕ್ಕರೆ ಕಾಯಿಲೆ ಸಮಸ್ಯೆಯಿಂದ ಬಳಲುತ್ತಿರುವ ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಮಧ್ಯರಾತ್ರಿ 12 ಸುಮಾರಿಗೆ ಮನೆಯಲ್ಲೇ ತಲೆಸುತ್ತು ಕಾಣಿಸಿಕೊಂಡಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಪಾರ್ವತಮ್ಮನವರನ್ನ ಕೂಡಲೇ ಪುತ್ರ ರಾಘವೇಂದ್ರ ರಾಜ್ ಕುಮಾರ್ ಹಾಗೂ ಮೊಮ್ಮಗ ಆಸ್ಪತ್ರೆಗೆ ದಾಖಲಿಸಿದ್ದಾರೆ.

loading...

No comments