Breaking News

ಪೆಟ್ರೋಲ್, ಗ್ಯಾಸ್ ಬೆಲೆ ಏರಿಕೆ ವಿರೋಧಿಸಿ ನಾಳೆ ಮೂಡಬಿದ್ರೆಯಲ್ಲಿ ಪ್ರತಿಭಟನೆ

ಮೂಡುಬಿದಿರೆ : ಅಡುಗೆ ಅನಿಲ ಮತ್ತು ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾರ್ಚ್ 7ರಂದು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿದೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ ಶನಿವಾರ ಸುದ್ದಿಗಾರರಿಗೆ ಮಾಹಿತಿ ನೀಡಿದರು. “ಕೇಂದ್ರ ಸರ್ಕಾರ ಅಡುಗೆ ಅನಿಲ ಬೆಲೆಯನ್ನು ಏಕಾಏಕಿ ರೂ 86 ಹೆಚ್ಚಳ ಮಾಡಿದೆ. ಕೇವಲ ನಾಲ್ಕು ತಿಂಗಳಲ್ಲಿ ಸುಮಾರು ರೂ 300 ಹೆಚ್ಚಳವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಭಾರೀ ಇಳಿಕೆಯಾದರು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುತ್ತಲೆ ಇದೆ.

ಇನ್ನೊಂದೆಡೆ ಬ್ಯಾಂಕಿನಲ್ಲಿ ನಗದು ವ್ಯವಹಾರದ ಮೇಲೆ ಶುಲ್ಕ ವಿಧಿಸಲು ಸರಕಾರ ಮುಂದಾಗಿದ್ದು ಇದು ನೋಟು ಅಮಾನ್ಯದಿಂದ ತೊಂದರೆಗೊಳಗಾದವರಿಗೆ ಬರೆ ಎಳೆದಂತಾಗಿದೆ. ಸರಕಾರದ ಬೆಲೆ ಏರಿಕೆ ನೀತಿ ಜನಸಾಮಾನ್ಯರನ್ನು ದಿನದಿಂದ ದಿನಕ್ಕೆ ಸಂಕಷ್ಟಕ್ಕೆ ತಳ್ಳುತ್ತಿದೆ” ಎಂದು ಆರೋಪಿಸಿದರು. “ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಮಂಗಳವಾರ ಬೆಳಿಗ್ಗೆ ಬ್ಲಾಕ್ ಕಾಂಗ್ರೆಸ್ ಕಚೇರಿ ಬಳಿಯಿಂದ ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ ನಂತರ ಪ್ರತಿಭಟನೆ ಸಭೆ ನಡೆಸಲಾಗುವುದು. ಬಳಿಕ ಸರಕಾರಕ್ಕೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಗುವುದು” ಎಂದು ಹೇಳಿದರು.

loading...

No comments