ಮರಳುಗಾರಿಕೆಗೆ ಅನುಮತಿ ನೀಡಲು ಪ್ರಮೋದ್ ಸೂಚನೆ
ಉಡುಪಿ : ಜಿಲ್ಲೆಯಲ್ಲಿ ಮರಳುಗಾರಿಕೆಗೆ ಅನುಕೂಲವಾಗುವಂತೆ ಹಾಗೂ ಕಾಮಗಾರಿಗೆ ಮರಳು ಲಭ್ಯವಾಗುವಂತೆ ಮಾಡಲು ಸಿ ಆರ್ ಝೆಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸುವ ಪ್ರಕ್ರಿಯೆಗಳಿಗೆ ಚಾಲನೆ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ನೀಡಿದ ಆದೇಶದಂತೆ ಮತ್ತು ಕೇಂದ್ರದ ಪರಿಸರ ಸಚಿವಾಲಯವು ಸೂಚಿಸಿದ ನಿರ್ದೇಶನದಂತೆ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯಲು ಕ್ರಮ ಕೈಗೊಳ್ಳಬಹುದು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಸಚಿವರು, ತಾನು ಈ ಹಿಂದೆ ನೀಡುತ್ತಿದ್ದ ಸಲಹೆಗಳನ್ನು ಪಾಲಿಸುತ್ತಿದ್ದಲ್ಲಿ ಇಂದು ಇಂತಹ ಪರಿಸ್ಥಿತಿ ಬರುತ್ತಲೇ ಇರಲಿಲ್ಲ ಎಂದರು. “ಮೀನುಗಾರಿಕಾ ಇಲಾಖೆ ಅಧಿಕಾರಿಗಳ ಅಭಿಪ್ರಾಯವನ್ನು ಪಡೆದುಕೊಂಡು ಮರಳು ತೆಗೆಯುವ ಪ್ರಕ್ರಿಯೆಗಳಿಗೆ ಚಾಲನೆ ನೀಡಿ” ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
-kale
loading...
No comments