ಅಯೋಧ್ಯೆ ರಾಮ ಮಂದಿರ ಪ್ರಕರಣ ಕೋರ್ಟ್ ಹೊರಗೆ ಬಗೆಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚನೆ
ನವದೆಹಲಿ: ಅಯೋಧ್ಯೆಯ ಮಂದಿರ ಪ್ರಕರಣವು ಸೂಕ್ಷ್ಮವಾದ ವಿಚಾರವಾಗಿದ್ದು, ಕೋರ್ಟ್ ಹೊರಗೆ ಬಗೆಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಅಯೋಧ್ಯೆ ರಾಮಮಂದಿರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಪಕ್ಷಗಳು ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮವಹಿಸಬೇಕು. ಇದು ‘ಸೂಕ್ಷ್ಮ’ ಹಾಗೂ ‘ಭಾವನಾತ್ಮಕ’ ವಿಷಯವಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಧಾರ್ಮಿಕ ಮತ್ತು ಸೂಕ್ಷ್ಮವಾದ ಈ ವಿಚಾರವನ್ನು ಸರ್ವಪಕ್ಷಗಳು ಸಮಾಲೋಚನೆ ನಡೆಸಿ ಪರಿಹರಿಸಬೇಕು ಎಂದು ಮುಖ್ಯನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ನ್ಯಾಯಪೀಠ ತಿಳಿಸಿದೆ.ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆ ಕೋರ್ಟ್‌ಗೆ ಸ್ವಾಮಿ ಮನವಿ ಮಾಡಿದ್ದರು. 2010ರಿಂದ ಪ್ರಕರಣ ಕೋರ್ಟ್‌ನಲ್ಲಿದೆ.
-prajavani
loading...
No comments