Breaking News

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ: ಕಾಮುಕ ಸೆರೆ


ಭಟ್ಕಳ :  ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯುವಕನನ್ನು ಭಟ್ಕಳ ನಗರ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಗುಳ್ಮಿ ನಿವಾಸಿ ಮೊಹಮ್ಮದ್ ಅಲ್ತಾಫ್ ಅರ್ಮಾರ್ ಎಂದು ಗುರುತಿಸಲಾಗಿದೆ.

ಈತ ಚೌಥನಿ ಮುಖ್ಯ ರಸ್ತೆಯ ಅಪ್ರಾಪ್ತ ಬಾಲಕಿಯೋರ್ವಳನ್ನು ಪರಿಚಯ ಮಾಡಿಕೊಂಡು ಆಕೆಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಬಳಿಕ ಕಾರಿನಲ್ಲಿ ಮನೆಗೆ ಬಿಡುವುದಾಗಿ ಹೇಳಿ ಮುರ್ಡೇಶ್ವರಕ್ಕೆ ಕರೆದೊಯ್ದು ಅಲ್ಲಿನ ವಸತಿ ಗೃಹವೊಂದರಲ್ಲಿ ಕೂಡಿಹಾಕಿ ಅತ್ಯಾಚಾರ ಮಾಡಿದ್ದಾನೆ ಎಂದು ಬಾಲಕಿಯ ತಾಯಿ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನನ್ವಯ ಪ್ರಕರಣವನ್ನು ದಾಖಲಿಸಿಕೊಂಡ ನಗರ ಠಾಣೆಯ ಪಿಎಸೈ ಹೆಚ್.ಬಿ.ಕುಡಕುಂಟಿ ಅವರು ಆರೋಪಿಯನ್ನು ಬಂಧಿಸಿ ಕಾರವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

loading...

No comments