Breaking News

ರಾಮಸೇನೆಯಿಂದ `ಘರ್ ವಾಪಸಿ’ ಕಾರ್ಯಕ್ರಮ



8 ಕುಟುಂಬಗಳ ಮರುಮತಾಂತರ


ಹೊನ್ನಾವರ : “ಹಿಂದೂ ಧರ್ಮದಿಂದ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ಉತ್ತರ ಕನ್ನಡ ಜಿಲ್ಲೆಯ 18 ಕುಟುಂಬಗಳನ್ನು ಮರಳಿ ಹಿಂದೂ ಧರ್ಮಕ್ಕೆ ಕರೆತರುವ `ಘರ್ ವಾಪಸಿ’ ಕಾರ್ಯಕ್ರಮವನ್ನು ರಾಮಸೇನೆಯ ಆಶ್ರಯದಲ್ಲಿ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಭಟ್ಕಳದಲ್ಲಿ ಏಪ್ರಿಲ್ 23ರಂದು ಆಯೋಜಿಸಲಾಗಿದೆ” ಎಂದು ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಸಾದ ಅತ್ತಾವರ ತಿಳಿಸಿದರು.

ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಭಾರತ ದೇಶದಲ್ಲಿದ್ದ ಪ್ರತಿಯೊಬ್ಬರೂ ಹಿಂದೂಗಳೇ ಆಗಿದ್ದರು. ಬ್ರಿಟಿಷರು ಮತ್ತು ಮೊಗಲರು ದೇಶದ ಮೇಲೆ ಆಕ್ರಮಣ ಮಾಡಿದ ನಂತರ ಇಲ್ಲಿನ ಹಿಂದೂಗಳನ್ನು ಮತಾಂತರ ಮಾಡಿದ್ದರು. ಮತಾಂತರಗೊಂಡಿದ್ದ ಭಟ್ಕಳ ಹಾಗೂ ಉತ್ತರ ಕನ್ನಡ ಜಿಲ್ಲೆಯ 18 ಕುಟುಂಬಗಳ 50 ಜನರನ್ನು ಘರ್ ವಾಪಸಿ ಕಾರ್ಯಕ್ರಮದಲ್ಲಿ ಹಿಂದೂ ಧರ್ಮಕ್ಕೆ ಕರೆತರಲಾಗುವುದು. ಇವುಗಳಲ್ಲಿ 12 ಮುಸ್ಲಿಂ ಹಾಗೂ 6 ಕ್ರಿಶ್ಚಿಯನ್ ಕುಟುಂಬಗಳು ಸೇರಿವೆ. ಇವರನ್ನು ಕಾನೂನು ಚೌಕಟ್ಟಿನಲ್ಲಿಯೇ ಹಿಂದೂ ಧರ್ಮಕ್ಕೆ ಕರೆತರಲಾಗುತ್ತಿದೆ. ಅವರಿಗೆ ಮುಂದೆ ಸೂಕ್ತ ಭದ್ರತೆಯನ್ನು ನೀಡಿ ಧರ್ಮದ ಮತ್ತು ಮಾನವೀಯತೆಯ ನೆಲೆಯಲ್ಲಿ ಅವರು ಸ್ವಾವಲಂಬಿ ಜೀವನ ನಡೆಸಲು ಸಹಕಾರ ನೀಡಲಾಗುವುದು” ಎಂದು ತಿಳಿಸಿದರು.

“ಘರ್ ವಾಪಸಿ ಕಾರ್ಯಕ್ರಮವನ್ನು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಭಟ್ಕಳದಲ್ಲಿ ನಡೆಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಮಠಗಳ ಸ್ವಾಮಿ, ಹಿಂದೂಪರ ಸಂಘಟನೆಯ ಪ್ರಮುಖರು ಪಾಲ್ಗೊಳ್ಳುವರು. ಭಟ್ಕಳ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರ ಹೆಸರುಗಳನ್ನು ಈಗ ಹೇಳಲಾಗುತ್ತಿಲ್ಲ” ಎಂದು ತಿಳಿಸಿದರು.

loading...

No comments