Breaking News

ಕೃಷ್ಣ ಸಹೋದರಿ ವಿಯೋಗ ಬಿಜೆಪಿ ಸೇರ್ಪಡೆ ಮುಂದೂಡಿಕೆ


ಬೆಂಗಳೂರು: ಇಂದು ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸಮ್ಮುಖದಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ಬಿಜೆಪಿ ಸೇರಬೇಕಿತ್ತು. ಆದ್ರೆ ಕೃಷ್ಣ ಅವರ ಸಹೋದರಿ ಸುನೀತಾ ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ. ಹೀಗಾಗಿ ಕೃಷ್ಣ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಮುಂದೂಡಿಕೆಯಾಗಿದೆ.
ಎಲ್ಲವೂ ನಿರೀಕ್ಷೆಯಂತೆ ನಡೆದಿದ್ದರೆ ಇಂದು ನವದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರ ಸಮ್ಮುಖದಲ್ಲಿ ಎಸ್.ಎಂ.ಕೃಷ್ಣ ಸೇರ್ಪಡೆಯಾಗಲು ವೇದಿಕೆ ಸಜ್ಜಾಗಿತ್ತು.  ಸಂಜೆ 5 ಗಂಟೆಗೆ ಎಸ್.ಎಂ.ಕೃಷ್ಣ ಅವರು ಪಕ್ಷ ಸೇರ್ಪಡೆ ಸಮಯವನ್ನು ನಿಗದಿಪಡಿಸಿದ್ದರು. ಇದಕ್ಕಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ರಮೇಶ್ ಜಿಗಜಿಣಗಿ ನವದೆಹಲಿಗೆ ತೆರಳಿದ್ದರು.



loading...

No comments