Breaking News

ಪರಿಕ್ಕರ್ ಪ್ರಮಾಣ ವಚನ ಸ್ವೀಕರಿಸಲು ತಡೆಯೊಡ್ಡಲು ಸುಪ್ರೀಂ ಕೋರ್ಟ್ ನಿರಾಕರಣೆ


ಸುಪ್ರೀಂ ಕೋರ್ಟ್ ಆದೇಶ ಕಾಂಗ್ರೆಸ್ಸಿಗೆ ಹಿನ್ನಡೆ
ನವದೆಹಲಿ : ಗೋವಾ ಸರ್ಕಾರ ರಚನೆ ಕುರಿತ ವಿವಾದ ಸಂಬಂಧ  ಸರ್ವೋಚ್ಛ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆದಿದ್ದು.ನೂತನ ಗೋವಾ ಮುಖ್ಯಮಂತ್ರಿಯಾಗಿ ಮನೋಹರ್ ಪರಿಕ್ಕರ್  ಪ್ರಮಾಣ ವಚನ ಸ್ವೀಕರಿಸಲು ತಡೆಯೊಡ್ಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಮತ್ತು ಈ ಕೂಡಲೇ ಬಿಜೆಪಿಗೆ ಬಹುಮತ  ಸಾಬೀತು ಪಡಿಸಲು ಆದೇಶ ನೀಡಿದೆ.ಈ ಎಲ್ಲಾ ಬೆಳವಣಿಗೆಯಿಂದ ಕಾಂಗ್ರೆಸ್ ತೀವ್ರ ಹಿನ್ನಡೆಯಾಗಿದೆ .  
ಪರಿಕ್ಕರ್ ಅವರಿಗೆ ಸರಕಾರ ರಚನೆಗೆ ರಾಜ್ಯಪಾಲೆ ಮೃದುಲಾ ಸಿನ್ಹಾ ಆಹ್ವಾನ ನೀಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ನ್ಯಾಯಾಲಯದ ಮೊರೆ ಹೋಗಿತ್ತು . ಸೋಮವಾರ ಸಂಜೆ ಗೋವಾ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಚಂದ್ರಕಾಂತ್ ಕಾವ್ಳೇಕರ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು , ತುರ್ತು ವಿಚಾರಣೆ ನಡೆಸುವಂತೆ ಕೋರಿದ್ದರು,

loading...

No comments