Breaking News

ಉತ್ತರ ಭಾರತದ ಮ್ಯಾಜಿಕ್ ಕರ್ನಾಟಕದಲ್ಲಿ ನಡೆಯುವುದಿಲ್ಲ : ಡಿಕೆಶಿ


ಬೆಂಗಳೂರು: ಉತ್ತರ ಭಾರತದ ರಾಜ್ಯಗಳಲ್ಲಿ ಜನ ಬಿಜೆಪಿ ಆಡಳಿತವನ್ನು ನೋಡಿರಲಿಲ್ಲ. ಆದರೆ ಕರ್ನಾಟಕದಲ್ಲಿ ಬಿಜೆಪಿ ಆಡಳಿತದ ಕರ್ಮಕಾಂಡವನ್ನು ನೋಡಿದ್ದಾರೆ. ಹಾಗಾಗಿ ಮತ್ತೊಮ್ಮೆ ಆ ಪಕ್ಷಕ್ಕೆ ಇಲ್ಲಿ ಅವಕಾಶ ಕೊಡುವುದಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಹೇಳಿದರು.   ಪಂಚರಾಜ್ಯಗಳ ಫಲಿತಾಂಶದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಭಾರತಕ್ಕೂ ದಕ್ಷಿಣ ಭಾರತಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಉತ್ತರ ಭಾರದಲ್ಲಿ ಬಿಜೆಪಿ ಆಡಳಿತವನ್ನು ಜನ ನೋಡಿರಲಿಲ್ಲ. ರಾಜ್ಯದಲ್ಲಿ ನೋಡಿದ್ದಾರೆ. ಯುಪಿಯಲ್ಲಿ ಬದಲಾವಣೆ ಬಯಸಿದ್ದಾರೆ. ಗೋವಾ-ಮಣಿಪುರದಲ್ಲಿ ಜನ ಕಾಂಗ್ರೆಸ್‍ಗೆ ಬೆಂಬಲ ನೀಡಿದ್ದಾರೆ. ಪಂಜಾಬ್‍ನಲ್ಲಿ ಕಾಂಗ್ರೆಸ್‍ಗೆ ಬಹುಮತ ಕೊಟ್ಟಿದ್ದಾರೆ ಎಂದು ಹೇಳಿದರು.

ಗೋವಾದಲ್ಲಿ ರಾಜ್ಯಪಾಲರು ಅಧಿಕಾರ ದುರುಪಯೋಗ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ನಡೆಯುತ್ತಿದ್ದಾರೆ. ಅವರು ಬಿಜೆಪಿ ಪಕ್ಷದ ಕಾರ್ಯಕರ್ತರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಗೋವಾ ರಾಜ್ಯಪಾಲರು ಅಧಿಕಾರ ರಚನೆಗೆ 15 ದಿನ ಸಮಯಾವಕಾಶ ಕೊಡುವ ಮೂಲಕ ಕುದುರೆ ವ್ಯಾಪಾರಕ್ಕೆ ಆಹ್ವಾನ ನೀಡಿದ್ದಾರೆ ಎಂದು ಹೇಳಿದರು.
ಪಂಚರಾಜ್ಯಗಳ ಚುನಾವಣೆ ಫಲಿತಾಂಶ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ನಮ್ಮ ರಾಜ್ಯದಲ್ಲಿ ಕಾಂಗ್ರೆಸ್‍ಗೆ ಭದ್ರ ನೆಲೆಯಿದೆ. ಉಪಚುನಾವಣೆಯಲ್ಲಿ ನಾವು ಗೆಲುವು ಸಾಧಿಸುತ್ತೇವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಅವರು ಹೇಳಿದರು.

loading...

No comments