ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಸಿಎಂ ಯೋಗಿ: ಖಾತೆ ಹಂಚಿಕೆ ಚರ್ಚೆ
ನವದೆಹಲಿ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ದಿಲ್ಲಿಗೆ ಭೇಟಿ ನೀಡಿದ್ದು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ವರಿಷ್ಠ ನಾಯಕರ ಜತೆ ಸಮಾಲೋಚನೆ ನಡೆಸಿದರು.
ತಮ್ಮ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಕುರಿತು ಚರ್ಚಿಸಲು ಅವರು ದಿಲ್ಲಿಗೆ ಆಗಮಿಸಿದ್ದರು. ಲಖನೌಗೆ ವಾಪಸಾಗುವ ಮುನ್ನ ಅವರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮತ್ತು ಪಕ್ಷದ ಹಿರಿಯ ಲಾಲ್‌ಕೃಷ್ಣ ಆಡ್ವಾಣಿ ಅವರನ್ನು ಭೇಟಿಯಾಗಲಿದ್ದಾರೆ.
vkloading...
No comments