Breaking News

ಆಪ್ ಹೀನಾಯ ಸೋಲಿಗೆ ಮತ ಯಂತ್ರ ಕಾರಣ ಅಂತೇ



ನವದೆಹಲಿ : ರಾಷ್ಟ್ರ ರಾಜಧಾನಿಯ ಮೂರು ಮಹಾನಗರ ಪಾಲಿಕೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿರುವುದಕ್ಕೆ ವಿದ್ಯುನ್ಮಾನ ಮತ ಯಂತ್ರ(ಇವಿಎಂ) ಕಾರಣ ಎಂದು ಬೊಟ್ಟು ಮಾಡಲಾಗಿದೆ.   ಇದು ಪ್ರಧಾನಿ ಮೋದಿ ಅಲೆ ಅಲ್ಲ. ಇವಿಎಂ ಬಲೆಯಿಂದ ಬಿಜೆಪಿ ಗೆದ್ದಿದೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕ ಎಂದು ದೆಹಲಿಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಗೋಪಾಲ್‍ರಾಯ್ ಆರೋಪಿಸಿದ್ದಾರೆ.   ಉತ್ತರ ಪ್ರದೇಶ ಹಾಗೂ ಉತ್ತರಾಖಂಡ್‍ನಲ್ಲಿ ಇವಿಎಂಗಳನ್ನು ತಿರುಚಿದಂತೆ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲೂ ತಿರುಚಲಾಗಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಫಲಿತಾಂಶ ಬಂದಿರುವುದು ಎಲ್ಲರಿಗೂ ಅಚ್ಚರಿ ಉಂಟು ಮಾಡಿದೆ ಎಂದು ಟೀಕಿಸಿದ್ದಾರೆ.

loading...

No comments