ಮಂಗಳೂರು ಎಎಸ್‍ಐ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ಮಂಗಳೂರು: ಉರ್ವಾ ಪೊಲೀಸ್ ಠಾಣೆ ಎಎಸ್‍ಐ ಮೇಲೆ ದುಷ್ಕರ್ಮಿಗಳು ಮಂಗಳವಾರ ರಾತ್ರಿ ಹಲ್ಲೆ ನಡೆಸಿದ್ದಾರೆ. ಲೇಡಿಹಿಲ್ ಸರ್ಕಲ್ ಬಳಿ ಬೈಕಿನಲ್ಲಿ ಬಂದ ಇಬ್ಬರು, ರಾತ್ರಿ ಗಸ್ತಿನಲ್ಲಿದ್ದ ಐತಪ್ಪ ಅವರನ್ನು ಅಡ್ಡಗಟ್ಟಿ ಅವರ ತಲೆಗೆ ರಾಡ್‍ನಿಂದ ಹೊಡೆದು ಪರಾರಿಯಾಗಿದ್ದಾರೆ.
ಮಂಗಳವಾರದಂದು ಯಾವುದೇ ಪೂರ್ವ ಅನುಮತಿ ಇಲ್ಲದೆ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲು ಯತ್ನಿಸಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ರು. ಈ ವೇಳೆ 7 ಮಂದಿ ಪೊಲೀಸ್ ಸೇರಿದಂತೆ ಹಲವು ಪ್ರತಿಭಟನಾಕಾರರಿಗೂ ಗಾಯಗಳಾಗಿತ್ತು. ಆದ್ರೆ ಪ್ರತಿಭಟನಾಕಾರರು ಪೊಲೀಸರು ದೌರ್ಜನ್ಯ ನಡೆಸಿದ್ದಾರೆ, ಅವರನ್ನ ಸುಮ್ಮನೆ ಬಿಡೋದಿಲ್ಲ ಎಂದು ಘೋಷಣೆ ಕೂಗಿದ್ದರು. ಹೀಗಾಗಿ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರಿಂದಲೇ ಎಎಸ್‍ಐ ಐತಪ್ಪ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
loading...
No comments