ಲವ್ ಜಿಹಾದ್ ಶಂಕೆ ಮುಸ್ಲಿಂ ಯುವಕನ ಮನೆಗೆ ನುಗ್ಗಿದ ಹಿಂದೂ ಯುವ ವಾಹಿನಿ ಕಾರ್ಯಕರ್ತರು
ಲಖನೌ: ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ ಯೋಗಿ ಅವರ ಹಿಂದೂಯುವ ವಾಹಿನಿ ಸಂಘಟನೆಯ ಕಾರ್ಯಕರ್ತರು ಮುಸ್ಲಿಂ ಯುವಕನೊಬ್ಬನ ಮನೆಗೆ ನುಗ್ಗಿದ್ದಾರೆ.
ಮೀರತ್‍ನ ಶಾಸ್ತ್ರಿ ನಗರ ನಿವಾಸಿಯಾದ ವಾಸಿಂ ಎಂಬ ಮುಸ್ಲಿಂ ಯುವಕ ತನ್ನ ಪ್ರೇಯಸಿಯೊಂದಿಗೆ ಇದ್ದಾಗ ಹಿಂದೂ ಯುವ ವಾಹಿನಿ ಕಾರ್ಯಕರ್ತರು ಮನೆಗೆ ನುಗ್ಗಿದ್ದಾರೆ. ಆ ನಂತರ ಈ ಜೋಡಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
ಹಿಂದೂ ಯುವ ವಾಹಿನಿ ಕಾರ್ಯಕರ್ತರು ಯುವಕನ ಮೇಲೆ ತೀವ್ರ ಹಲ್ಲೆ ನಡೆಸಿದ್ದಾರೆ. ವಶಕ್ಕೆ ಪಡೆದುಕೊಂಡಿರುವ ಈ ಜೋಡಿ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇವರಿಬ್ಬರನ್ನು ಬಂಧ ಮುಕ್ತಗೊಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಲೋಕ್ ಪ್ರಿಯದರ್ಶಿ ಹೇಳಿದ್ದಾರೆ.
ಪೊಲೀಸರ ಪ್ರಕಾರ, ಮುಜಾಫರ್‍ನಗರದ ನಿವಾಸಿಯಾದ ವಾಸಿಂ ಮೀರತ್‍ನಲ್ಲಿರುವ ಹೋಟೆಲ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಈತ ಶಾಸ್ತ್ರಿ ನಗರದಲ್ಲಿರುವ ಬಾಡಿಗೆ ಕೋಣೆಯಲ್ಲಿ ವಾಸಿಸುತ್ತಿದ್ದು ಅಲ್ಲಿಗೆ ತನ್ನ ಪ್ರೇಯಸಿಯನ್ನು ಕರೆದುಕೊಂಡು ಬಂದಿದ್ದಾನೆ. ಈತ ಪ್ರೇಯಸಿಯನ್ನು ಕರೆದುಕೊಂಡು ಬಂದಿದ್ದನ್ನು ನೋಡಿದ ಸ್ಥಳೀಯರು ಹಿಂದೂ ಯುವ ವಾಹಿನಿಯ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದು ಸಂಘಟನೆಯ ನೇತಾರ ಸಚಿನ್ ಗುಪ್ತಾ ಮತ್ತು ನಾಗೇಂದ್ರ ತೋಮರ್ ನೇತೃತ್ವದಲ್ಲಿ ಹಲವಾರು ಕಾರ್ಯಕರ್ತರು ಬಂದು ವಾಸಿಂ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ.
loading...
No comments