ರೌಡಿ ಶೀಟರ್ ಖುರೇಷಿ ಪರ ಬ್ಯಾಟಿಂಗ್ ಮಾಡಿದ ಕುಮಾರಸ್ವಾಮಿ
ಮಂಗಳೂರು : ಕೊಲೆ ಪ್ರಕರಣ ಒಂದರಲ್ಲಿ ಬಂಧಿತನಾಗಿರುವ ಪಾಪ್ಯುಲರ್ ಫ್ರಂಟ್ ಇಂಡಿಯಾ ಅಹಮ್ಮದ್ ಖುರೇಷಿ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ ಎಂಬ ಆರೋಪ ಸಂಬಂಧ ಪಟ್ಟಂತೆ ಮಂಗಳೂರಿಗೆ ಭೇಟಿ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ರೌಡಿ ಶೀಟರ್ ಖುರೇಷಿ ಪರ ಬ್ಯಾಟಿಂಗ್ ಮಾಡಿದ್ದಾರೆ .
ಕುಮಾರ್ ಸ್ವಾಮಿ ಹೇಳಿದ್ದೇನು
ಅಹ್ಮದ್ ಖುರೇಷಿ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಪ್ರಕರಣದ ಕುರಿತಂತೆ ಸರಕಾರ ಮತ್ತು ಸಂತ್ರಸ್ತರ ಕಡೆಯಿಂದ ಮಾಹಿತಿ ಪಡೆದಿದ್ದೇನೆ.ಖುರೇಷಿಯನ್ನು ಮಾ.21ರಂದು ಬಂಧಿಸಿದ್ದರೂ ನ್ಯಾಯಾಲಯಕ್ಕೆ ಹಾಜರುಪಡಿಸದೆ ಮಾ.27ವರೆಗೆ ವಿಚಾರಣೆ ನಡೆಸಿರುವುದು ಸಂಶಯಕ್ಕೆ ಕಾರಣವಾಗಿದೆ. ಕೆಳಮಟ್ಟದ ಅಧಿಕಾರಿಗಳ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಿಯಂತ್ರಣ ಇಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದರು. ಈ ಪ್ರಕರಣದಲ್ಲಿ ಕೆಲವು ಪೊಲೀಸ್ ಅಧಿಕಾರಿಗಳಿಂದ ಕರ್ತವ್ಯ ಲೋಪ ಆಗಿರುವುದನ್ನು ಗಮನಿಸಿದ್ದೇನೆ. ಈ ಬಗ್ಗೆ ಸದನದಲ್ಲಿ ಪ್ರಸ್ತಾವ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಒಳ ಒಪ್ಪಂದ ಮಾಡಿಕೊಂಡಿಲ್ಲ
ಜೆಡಿಎಸ್ ಪಕ್ಷ ಯಾವ ಪಕ್ಷಗಳ ಜೊತೆಯಲ್ಲೂ ಒಳ ಒಪ್ಪಂದ ಮಾಡಿಕೊಂಡಿಲ್ಲ. ಈ ಹಿಂದೆ ಎರಡು ಪಕ್ಷಗಳ ಜೊತೆ ಒಪ್ಪಂದ ಮಾಡಿಕೊಂಡು ಸರಕಾರ ನಡೆಸಿ ಕಹಿ ಅನುಭವವಾಗಿದೆ. ಹೀಗಾಗಿ ೨೦೧೮ರ ಚುನಾವಣೆಯಲ್ಲಿ ಬೇರೆ ಪಕ್ಷಗಳ ಜೊತೆ ಒಪ್ಪಂದ ಮಾಡಿಕೊಳ್ಳುವುದಿಲ್ಲ’ ಎಂದುಕುಮಾರಸ್ವಾಮಿ ಹೇಳಿದ್ದಾರೆ.
loading...
No comments