Breaking News

ಹಣ ಹಂಚಿದ ಆರೋಪ ಲಕ್ಷ್ಮಿಹೆಬ್ಬಾಳ್ಕರ್ ವಿರುದ್ಧ ಚುನಾವಣಾಧಿಕಾರಿಗೆ ದೂರು



ಬೆಂಗಳೂರು : ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿಹೆಬ್ಬಾಳ್ಕರ್ ಅವರು ಗುಂಡ್ಲುಪೇಟೆ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಮತದಾರರಿಗೆ ಹಣ ಹಂಚಿದ್ದು, ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ಬಿಜೆಪಿ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದೆ.
ಶಾಸಕ ವಿಜಯಕುಮಾರ್ ನೇತೃತ್ವದ ಬಿಜೆಪಿ ನಿಯೋಗ ಇಂದು ನಗರದ ಶೇಷಾದ್ರಿ ರಸ್ತೆಯಲ್ಲಿರುವ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ಲಕ್ಷ್ಮಿಹೆಬ್ಬಾಳ್ಕರ್ ವಿರುದ್ದ ದೂರು ನೀಡಿತು.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುಂಡ್ಲುಪೇಟೆ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚುತ್ತಿರುವ ವಿಡಿಯೋವನ್ನು ಉಲ್ಲೇಖಿಸಿ ಬಿಜೆಪಿ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದೆ.
ಕಾಂಗ್ರೆಸ್‌ನ ಮಹಿಳಾ ಮುಖಂಡರು ಹಣ ಹಂಚುತ್ತಿರುವುದು ಸ್ಪಷ್ಟವಾಗಿರುವುದರಿಂದ ಅವರ ವಿರುದ್ದ ಕ್ರಮ ಕೈಗೊಳ್ಳುವಂತೆಯೂ ನಿಯೋಗ ಮನವಿ ಮಾಡಿದೆ.
ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣಾ ಅಕ್ರಮಗಳನ್ನು ನಡೆಸಲು ಪ್ರಯತ್ನ ನಡೆಸಿದ್ದು, ಇಲ್ಲಿ ಚುನಾವಣಾ ಕಾರ್ಯಗಳಿಗೆ ಅರೆಸೇನಾ ಸಿಬ್ಬಂದಿಯನ್ನು ನಿಯೋಜನೆ ಮಾಡುವಂತೆ ಬಿಜೆಪಿ ನಿಯೋಗ ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದೆ.
ನಿಯೋಗದಲ್ಲಿ ಬಿಜೆಪಿ ಮುಖಂಡ ವಿವೇಕರೆಡ್ಡಿ ಮತ್ತಿತರರು ಇದ್ದರು.
ಬಿಜೆಪಿಯ ದೂರನ್ನು ಮುಖ್ಯ ಚುನಾವಣಾಧಿಕಾರಿ ಅನಿಲ್‌ಕುಮಾರ್ ಝಾ ಸ್ವೀಕರಿಸಿದರು.


loading...

No comments