ಝಾಕೀರ್ ನಾಯಕ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದ ಎನ್ಐಎ
ಮುಂಬೈ: ವಿವಾದಾತ್ಮಕ ಇಸ್ಲಾಂ ಧರ್ಮ ಬೋಧಕ ಝಾಕೀರ್ ನಾಯಕ್ ವಿರುದ್ಧ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ವಿಶೇಷ ನ್ಯಾಯಾಲಯ ಗುರುವಾರ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಉಗ್ರದಾಳಿ ಪ್ರಕರಣದಲ್ಲಿ ಕೈವಾಡ ಇರುವ ಹಿನ್ನೆಲೆಯಲ್ಲಿ ಎನ್‍ಐಎ ಈ ಕ್ರಮಕ್ಕೆ ಮುಂದಾಗಿದೆ. ಕಳೆದ ವರ್ಷ ಕಾನೂನು ಬಾಹಿರ ಚಟುವಟಿಕೆಗಳ (ನಿಯಂತ್ರಣ) ಕಾಯಿದೆಯಡಿ ಎನ್‌ಐಎ ಪ್ರಕರಣ ದಾಖಲಿಸಿತ್ತು.
ಇದುವರೆಗೆ ಮೂರು ಸಮನ್ಸ್ ಜಾರಿ ಮಾಡಿದ್ದರೂ ನಾಯಕ್ ಕೋರ್ಟ್‍ಗೆ ಹಾಜರಾಗಿಲ್ಲ ಎಂದು ನ್ಯಾಯಾಲಯಕ್ಕೆ ಎನ್‌ಐಎ ತಿಳಿಸಿದ್ದು, ಇಂಟರ್‌ಪೋರ್ ನೆರವು ಪಡೆದು ಭಾರತಕ್ಕೆ ಕರೆತರಲಾಗುತ್ತದೆ ಎಂದು ಹೇಳಿದೆ.
loading...
No comments