ಸಾಧ್ವಿ ಪ್ರಜ್ಞಾಗೆ ಸಿಂಗ್ ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್
ನವದೆಹಲಿ : ಮಹಾರಾಷ್ಟ್ರದ ಮಾಲೇಂಗಾವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕುರ್‌ಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ.
ಆದರೆ, ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಲೆ.ಕರ್ನಲ್ ಪ್ರಸಾದ್ ಪುರೋಹಿತ್‌ಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.
ಐದು ಲಕ್ಷ ರೂ. ಭದ್ರತೆ ಪಡೆದು ಸಾಧ್ವಿಗೆ ಕೋರ್ಟ್ ಜಾಮೀನು ನೀಡಿದೆ. ಪುರೋಹಿತ್ ಜಾಮೀನು ಅರ್ಜಿ ಕುರಿತ ಆದೇಶವನ್ನು ಕೋರ್ಟ್ ಮಾರ್ಚ್‌ನಲ್ಲಿ ಕಾಯ್ದಿರಿಸಿತ್ತು. ವಿಚಾರಣಾ ನ್ಯಾಯಾಲಯದ ಜಾಮೀನು ನಿರಾಕರಿಸಿದ ನಂತರ ಇಬ್ಬರೂ ಹೈಕೋರ್ಟ್ ಮೆಟ್ಟಿಲೇರಿದ್ದರು.
ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸುವ ಮೊದಲು ಹಲವಾರು ಸಾಕ್ಷಿದಾರರು ತಮಗೆ ಸುಳ್ಳು ಸಾಕ್ಷಿ ಹೇಳುವಂತೆ ಎನ್‌ಟಿಎಸ್ ಅಧಿಕಾರಿಗಳು ಒತ್ತಾಯಿಸಿದ್ದರು ಎಂದು ಹೇಳಿಕೆ ನೀಡಿರುವುದರಿಂದ ಸಾಧ್ವಿಗೆ ಜಾಮೀನು ನೀಡಲು ಯಾವುದೇ ತಕರಾರಿಲ್ಲ ಎಂದು ಎನ್‌ಐಎ ಹೇಳಿತ್ತು.
No comments