Breaking News

ಮುಂದಿನ ಚುನಾವಣೆಗೆ ಶ್ರೀರಾಮ ಸೇನೆ ಸ್ಪರ್ಧೆ
ಮಂಗಳೂರು : ಮುಂದಿನ ವಿಧಾನಸಭಾ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳು ಈಗಿನಿಂದಲೇ ಕಸರತ್ತು ಆರಂಭಿಸಿರುವಂತೆಯೇ ಶ್ರೀರಾಮ ಸೇನೆ ಕೂಡಾ ಚುನಾವಣೆಗೆ ಸ್ಪರ್ಧಿಸುವುದಾಗಿ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ೨೦೦೯ರಲ್ಲಿ ನಡೆದ ಪಬ್ ದಾಳಿ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನ ನ್ಯಾಯಾಲಯಕ್ಕೆ ಹಾಜರಾಗಲು ಬಂದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ಕೆಲವೆಡೆ ಶ್ರೀರಾಮಸೇನೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ನಾವು ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಅಥವಾ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಎಲ್ಲೆಲ್ಲಿ ಸಾಧ್ಯವೋ ಅಲ್ಲಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ಈ ಕುರಿತು ಅಂತಿಮ ನಿರ್ಧಾರವಾಗಿಲ್ಲ ಎಂದು ಹೇಳಿದರು.

ಇನ್ನು ಹಿಂದೂಗಳ ಮೇಲೆ ದೌರ್ಜನ್ಯ, ಹಿಂದೂ ನಾಯಕರ ಕೊಲೆ ಯತ್ನದ ಸಂಚು ನಡೆಯತ್ತಿದೆ. ಇದರ ಹಿಂದೆ ಪಿಎಫ್‌ಐ ಇದೆ. ರಾಜ್ಯ ಸರ್ಕಾರ ಪಿಎಫ್‌ಐ ನಿಷೇಧಿಸುವ ಬದಲು ಪ್ರೋತ್ಸಾಹಿಸುತ್ತಿದೆ. ಹಿಂದೂ ಮುಖಂಡರುಗಳ ಹತ್ಯೆ ಸರ್ಕಾರಿ ಪ್ರಾಯೋಜಕತ್ವದಲ್ಲಿ ನಡೆಯುತ್ತಿದೆ ಎಂದ ರುದ್ರೇಶ್, ಮೈಸೂರಿನ ರಾಜು, ಮೂಡುಬಿದಿರೆಯ ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣಗಳನ್ನು ಉದಾಹರಿಸಿ ಹೇಳಿದರು. ಹುಣಸೂರಿನಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಿ ಕೊಲೆ ಮಾಡಿರುವುದು ಪಿಎಫ್‌ಐ ಸಂಘಟನೆ. ಆದರೆ ಸರ್ಕಾರ ಮೈಸೂರು, ಹಾಸನ, ಶಿವಮೊಗ್ಗಗಳಲ್ಲಿ ಪಿಎಫ್‌ಐ ಮೇಲಿದ್ದ ೨೦೦ಕ್ಕೂ ಅಧಿಕ ಕೇಸ್‌ಗಳನ್ನು ಹಿಂದಕ್ಕೆ ಪಡೆದಿದೆ. ಇದರಿಂದಾಗಿ ರಾಜ್ಯದಲ್ಲಿ ಹಿಂದೂ ಮುಖಂಡರ ಕೊಲೆಗೆ ಸರ್ಕಾರವೇ ಪ್ರೋತ್ಸಾಹ ನೀಡಿದಂತಾಗಿದೆ ಎಂದು ಆರೋಪಿಸಿದ್ದಾರೆ.
loading...

No comments